ಸಿನಿಮಾ

ಸಚಿವ ಸ್ಥಾನ ನೀಡಿದ್ದರೆ ಚೆನ್ನಾಗಿತ್ತು: ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು: ಹಿರಿಯ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಈ ಬಗ್ಗೆ ಅವರು ಸುದ್ದಿಗಾರರೊಂದಿಗೆ ಮತಾನಾಡುತ್ತಾ, ಸಚಿವ ಸ್ಥಾನ ತಪ್ಪಿದ್ದು, ಉಪಸಭಾಧ್ಯಕ್ಷ ಸ್ಥಾನ ಎಂದು ಹೇಳಿದ್ದಾರೆ. ಆದರೆ ನಾನಿನ್ನೂ ಉಪಸಭಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ತಿರ್ಮಾನಿಸಿಲ್ಲ ಎಂದು ಹೇಳಿದರು.

ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಿದ್ದರೆ ಚೆನ್ನಾಗಿತ್ತು. ನಾನು ಶಾಸಕನಾಗಿಯೇ ಇರುತ್ತೇನೆ. ಈ ಬಗ್ಗೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಲಾಗುವುದು. ಸಚಿವ ಸ್ಥಾನ ಯಾಕೆ ಸಿಕ್ಕಿಲ್ಲ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ನಾಳೆ ದೇಶಾದ್ಯಂತ ಕಾಮೆಡ್-ಕೆ ಪರೀಕ್ಷೆ

ಈ ಕುರಿತು “ವಿಜಯವಾಣಿ”ಯೊಂದಿಗೆ ಮಾತನಾಡಿರುವ ಅವರು, “ಡೆಪ್ಯುಟಿ ಸ್ಪೀಕರ್​ ಸ್ಥಾನ ನೀಡುವುದಾಗಿ ಹೇಳಿದ್ದಾರೆ. ನಾನು ಬೇಡ ಎಂದಿದ್ದೇನೆ. ನನ್ನ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಇತರ ಜಿಲ್ಲೆಗಳಿಂದ ಬಂದಿದ್ದ ಜನರು ನಿನ್ನೆಯೇ ವಾಪಸ್ ಹೊರಟು ಹೋದರು. ಸಿದ್ದರಾಮಯ್ಯ ಅವರ ಒತ್ತಾಯಕ್ಕೆ ಡೆಪ್ಯುಟಿ ಸ್ಪೀಕರ್​ ಸ್ಥಾನ ಪಡೆಯಬೇಕಷ್ಟೇ” ಎಂದರು.

ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೊಡದಿದ್ರೆ ಕಾಂಗ್ರೆಸ್​ ಕಚೇರಿ ಮುಂದೆ ಸಾಯ್ತೀನಿ!

ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿದ್ದರೆ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಅಭಿಮಾನಿಯೊನ್ನ ಪತ್ರ ಬರೆದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪತ್ರ ವೈರಲ್ ಆಗಿದೆ.

ಇದನ್ನೂ ಓದಿ: ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ ಚುರುಕು: ಮಂಡ್ಯ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ

ನಲ್ಲೂರುಮೋಳೆಯ ಚಂದ್ರಶೇಖರ್ ಪತ್ರ ಬರೆದಿರುವ ಅಭಿಮಾನಿ. “ನಮ್ಮ ಉಪ್ಪಾರ ಸಮಾಜದ ಏಕೈಕ ಶಾಸಕ, ನಾಲ್ಕು ಬಾರಿ ಗೆದ್ದಿರುವ ಸಿ.ಪುಟ್ಟರಂಗಶೆಟ್ಟಿಗೆ ಕಾಂಗ್ರೆಸ್ ಸಚಿವ ಸ್ಥಾನ ಕೊಡದಿದ್ದರೆ ನಾನು ಚಂದ್ರಶೇಖರ್ s/o ನಂಜುಂಡಶೆಟ್ಟಿ ನಲ್ಲೂರುಮೋಳೆ ಕಾಂಗ್ರೆಸ್ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದು. ನಂಬಿಕೆ ದ್ರೋಹದ ಕೆಲಸವನ್ನು ಕಾಂಗ್ರೆಸ್ ಮತ್ತು ಹೈಕಮಾಂಡ್ ಮಾಡಿದೆ.‌ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ‌ ಕೊಡದಿದ್ದರೆ ಜಿಲ್ಲಾ ಅಥವಾ ಕೆಪಿಸಿಸಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

Latest Posts

ಲೈಫ್‌ಸ್ಟೈಲ್