ಸಚಿವ ಸಿ.ಎಸ್. ಶಿವಳ್ಳಿ ಇನ್ನಿಲ್ಲ

Latest News

ಸಾಲ ಮರುಪಾವತಿಸದ ಮಹಿಳೆಯರ ಮನೆಗೆ ಬೀಗ ಜಡಿದ ಹಣಕಾಸು ಸಂಸ್ಥೆ: ಛಾವಣಿ ಏರಿ ಮನೆ ಪ್ರವೇಶಿಸುತ್ತಿರುವ ಮಹಿಳೆಯರು

ಮೈಸೂರು: ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಗ್ರಾಮಶಕ್ತಿ ಮೈಕ್ರೋ ಫೈನಾನ್ಸ್​ ಸಂಸ್ಥೆ ಇಬ್ಬರು ಬಡ ಮಹಿಳೆಯರ ಮನೆಗೆ ಬೀಗ ಜಡಿದಿದೆ. ಪಡೆದಿದ್ದ ಸಾಲದ ಎರಡು...

24 ಗಂಟೆಯೊಳಗೆ ಕುರಿಯ ಡಬಲ್ ಮರ್ಡರ್ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ವಿಜಯವಾಣಿ ಸುದ್ದಿಜಾಲ ಪುತ್ತೂರು ನ.19 ರಂದು ಬೆಳಗ್ಗೆ ಬೆಳಕಿಗೆ ಬಂದ ಜೋಡಿ ಕೊಲೆ ಕೃತ್ಯದ ಆರೋಪಿಯನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ...

ಮಾಜಿ ಸಿಎಂ ಸಿದ್ದು ವಿರುದ್ಧ ಗುಡುಗಿದ ಸಿಎಂ ಬಿಎಸ್​ವೈ ಸಂಸದೆ ಸುಮಲತಾ ಬೆಂಬಲ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಉಪಚುನಾವಣೆಯ ಕದನ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಹಾಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತಿನ ಚಾಟಿ...

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಹುಬ್ಬಳ್ಳಿ: ಪೌರಾಡಳಿತ ಸಚಿವ, ಕುಂದಗೋಳ ಕ್ಷೇತ್ರದ ಶಾಸಕ ಸಿ.ಎಸ್. ಶಿವಳ್ಳಿ (57) ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.

ಇಲ್ಲಿಯ ಜಯಪ್ರಕಾಶ ನಗರದ ಮದನಿ ಕಾಲನಿ ನಿವಾಸದಲ್ಲಿ ಮಧ್ಯಾಹ್ನ ಕಾರ್ಯಕರ್ತರೊಂದಿಗೆ ಚರ್ಚೆ ಮಾಡುತ್ತಿದ್ದಾಗ ಶಿವಳ್ಳಿಗೆ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದರು. ತಕ್ಷಣ ಅಲ್ಲಿಗೆ ಧಾವಿಸಿದ ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ನೇತೃತ್ವದ ವೈದ್ಯರ ತಂಡ ಪ್ರಾಥಮಿಕ ಚಿಕಿತ್ಸೆ ನೀಡಿತು. ಕಿಮ್ಸ್​ವರೆಗೆ ಕರೆದೊಯ್ಯಲು ಸಮಯ ಹಿಡಿಯುವ ಕಾರಣ ಆಂಬುಲೆನ್ಸ್ ಮೂಲಕ ಮನೆ ಸಮೀಪದ ಲೈಫ್​ಲೈನ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಯಿತು. ಆದರೆ, ಮಧ್ಯಾಹ್ನ 1.30ರ ಹೊತ್ತಿಗೆ ಕೊನೆಯುಸಿರೆಳೆದರು. ಇವರಿಗೆ ಪತ್ನಿ ಕುಸುಮಾ, ಪುತ್ರಿಯರಾದ ದೀಪಾ, ರೂಪಾ ಮತ್ತು ಪುತ್ರ ಅಮರಶಿವ ಇದ್ದಾರೆ.

ಕುಂದಗೋಳದ ಯರಗುಪ್ಪಿ ಗ್ರಾಮದ ಸತ್ಯಪ್ಪ ಶಿವಳ್ಳಿ ಹಾಗೂ ಗಂಗಮ್ಮ ಪುತ್ರರಾಗಿ ಜನಿಸಿದ ಶಿವಳ್ಳಿ, ಬಿಎ ಪದವಿ ಪೂರೈಸಿದ್ದಾರೆ. ಮಾಜಿ ಸಿಎಂ ಬಂಗಾರಪ್ಪ ಅಭಿಮಾನಿಯಾಗಿ, ಅವರ ಕರ್ನಾಟಕ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡಿದರು. ಒಮ್ಮೆ ಪಕ್ಷೇತರರಾಗಿ, 2 ಸಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಸಿಎಂ ಸಂಸದೀಯ ಕಾರ್ಯದರ್ಶಿಯಾಗಿದ್ದರು. ಪ್ರಸಕ್ತ ಸರ್ಕಾರದಲ್ಲಿ ಅವರು ಪೌರಾಡಳಿತ ಮಂತ್ರಿಯಾಗಿದ್ದರು. ಜನರ ನಡುವೆ ಬೆಳೆದ ನಾಯಕ ಎಂದೇ ಖ್ಯಾತಿಗಳಿಸಿದ್ದರು. ಶನಿವಾರ ಮಧ್ಯಾಹ್ನ ಸ್ವಗ್ರಾಮ ಯರಗುಪ್ಪಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮೋದಿ ಶ್ರದ್ಧಾಂಜಲಿ

ಕರ್ನಾಟಕಕ್ಕೆ ಶಿವಳ್ಳಿ ನೀಡಿದ ಕೊಡುಗೆಯಿಂದ ಸ್ಮರಣೀಯ ಆಗಿದ್ದಾರೆ. ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ನಲ್ಲಿ ಸಂತಾಪ ಸೂಚಿಸಿದ್ದಾರೆ.

ನಾನು ಧಾರವಾಡದ ಕಟ್ಟಡ ದುರಂತ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ್ದಾಗ ಶಿವಳ್ಳಿಯವರು ರಾತ್ರಿ 9 ಗಂಟೆವರೆಗೂ ನನ್ನೊಂದಿಗೇ ಇದ್ದರು. ಈಗ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ.

| ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ

ಸರಳ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಶಿವಳ್ಳಿ ಸಾಮಾಜಿಕವಾಗಿ ಅದರಲ್ಲೂ ಬಡವರ ಬಗೆಗೆ ವಿಶೇಷ ಕಾಳಜಿ ಹೊಂದಿದ್ದರು. ರಂಭಾಪುರಿ ಪೀಠದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಪರಮಾತ್ಮನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.

| ಶ್ರೀ ಡಾ.ವೀರಸೋಮೇಶ್ವರ ಜಗದ್ಗುರುಗಳು ಬಾಳೆಹೊನ್ನೂರು ರಂಭಾಪುರಿ ಪೀಠ

ಕೆಸಿಪಿಯಿಂದ ಸ್ಪರ್ಧಿಸಿದ್ದರು

ಸಿ.ಎಸ್. ಶಿವಳ್ಳಿ ಅವರು 1994ರಲ್ಲಿ ಕೆಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದರು. 1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜಯಿಯಾದರು. ನಂತರ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದರು. 2004 ಮತ್ತು 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. 2013 ಮತ್ತು 2018ರಲ್ಲಿ ಕಾಂಗ್ರೆಸ್​ನಿಂದ ಗೆದ್ದಿದ್ದರು.

ದಿಕ್ಕು ಬದಲಿಸಿದ 7 ಮತಗಳ ಸೋಲು!

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಿವಳ್ಳಿ 7 ಮತಗಳಿಂದ ಸೋತಿದ್ದರು. ಆಗ ತಂದೆ ಸತ್ಯಪ್ಪ, ಬೇಸರ ಬೇಡ, ಮುಂದೆ ಶಾಸಕನಾಗಿ ಗೆದ್ದು ಬಾ ಎಂದಿದ್ದರಂತೆ. ಡಾ. ರಾಜ್​ಕುಮಾರ್ ಅಭಿಮಾನಿಯಾಗಿದ್ದ ಇವರು 1980ರ ದಶಕದಲ್ಲಿ ಕುಂದಗೋಳ ತಾಲೂಕಿನಲ್ಲಿ ಅಭಿಮಾನಿ ಸಂಘ ಹುಟ್ಟುಹಾಕಿ, ಅಧ್ಯಕ್ಷರಾಗಿದ್ದರು. ಅಲ್ಲಿಂದಲೇ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದರು. ರೈತಪರ ಹೋರಾಟಕ್ಕೆ ಧುಮುಕಿ ಕಳಸಾ-ಬಂಡೂರಿ ಜಾರಿಗಾಗಿ ಕುಂದಗೋಳದಿಂದ ಧಾರವಾಡವರೆಗೆ ಪಾದಯಾತ್ರೆ, ದೆಹಲಿಯ ಜಂತರ್-ಮಂಥರ್​ನಲ್ಲಿ ಧರಣಿ ನಡೆಸಿದ್ದರು.

ಸಚಿವರಾಗಿ 3 ತಿಂಗಳು

ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಶಿವಳ್ಳಿಗೆ ಕುರುಬ ಕೋಟಾದಲ್ಲಿ ಅವಕಾಶ ಸಿಕ್ಕಿತ್ತು. 2018ರ ಡಿ. 22ರಂದು ಪ್ರಮಾಣ ವಚನ ಸ್ವೀಕರಿಸಿದ ಅವರಿಗೆ ಪೌರಾಡಳಿತ ಇಲಾಖೆ ದೊರಕಿತ್ತು. ಅವರು ಸಚಿವರಾಗಿ ಶುಕ್ರವಾರಕ್ಕೆ ಸರಿಯಾಗಿ 3 ತಿಂಗಳು.

3 ದಿನ ಶೋಕಾಚರಣೆ

ಸಚಿವ ಶಿವಳ್ಳಿ ನಿಧನ ಹಿನ್ನೆಲೆ 22ರಿಂದ 24ರವರೆಗೆ 3 ದಿನ ಶೋಕಾಚರಣೆ ಘೋಷಿಸಲಾಗಿದೆ. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಪರೀಕ್ಷಾ ಕೇಂದ್ರ, ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಧಾರವಾಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...