ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಮೆಲ್ಬೋರ್ನ್‌ನಿಂದ ಶಿಫ್ಟ್​ ಸಾಧ್ಯತೆ

Border-GavaskarTrophy_web1
Published on

ಮೆಲ್ಬೋರ್ನ್: ವಿಕ್ಟೋರಿಯಾ ರಾಜ್ಯದಲ್ಲಿ ಕರೊನಾ ವೈರಸ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ವಿರುದ್ಧದ ಪ್ರತಿಷ್ಠಿತ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಮೆಲ್ಬೋರ್ನ್‌ನಿಂದ ಅಡಿಲೇಡ್‌ಗೆ ಸ್ಥಳಾಂತರಿಸುವ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಚಿಂತನೆ ನಡೆಸಿದೆ.

ವರ್ಷಾಂತ್ಯದ ಭಾರತ ವಿರುದ್ಧದ ಸರಣಿಯಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ 30ರವರೆಗೆ ನಿಗದಿಯಾಗಿದೆ. ವಿಕ್ಟೋರಿಯಾದಲ್ಲಿ 13 ಸಾವಿರಕ್ಕೂ ಅಧಿಕ ಕರೊನಾ ಪ್ರಕರಣ ದಾಖಲಾಗಿದ್ದು, 170 ಜನರು ಮೃತಪಟ್ಟಿದ್ದಾರೆ. ಇದರಿಂದಾಗಿ ರಾಜ್ಯದ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿ ಅಡಿಲೇಡ್‌ನಲ್ಲಿ 457 ಕರೊನಾ ಪ್ರಕರಣಗಳಷ್ಟೇ ದಾಖಲಾಗಿದ್ದು, ಈ ಪೈಕಿ 12 ಮಾತ್ರ ಸಕ್ರಿಯ ಪ್ರಕರಣಗಳಿವೆ.

ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ ಡಿಸೆಂಬರ್ 3ರಂದು ಬ್ರಿಸ್ಬೇನ್‌ನಲ್ಲಿ ಆರಂಭಗೊಳ್ಳಲಿದೆ. ಬಳಿಕ ಡಿಸೆಂಬರ್ 11ರಿಂದ 15ರವರೆಗೆ ಅಡಿಲೇಡ್‌ನಲ್ಲಿ ಅಹರ್ನಿಶಿ ಟೆಸ್ಟ್ ನಿಗದಿಯಾಗಿದೆ. ಆಸ್ಟ್ರೇಲಿಯಾ ಕ್ರಿಕೆಟ್‌ಗೆ ಆರ್ಥಿಕ ಶಕ್ತಿ ತುಂಬಲು ಈ ಸರಣಿ ಪ್ರಮುಖವೆನಿಸಿದೆ. ಈ ಸರಣಿ ನಡೆಯದಿದ್ದರೆ ಸಿಎಗೆ 1,600 ಕೋಟಿ ರೂ. ನಷ್ಟ ಉಂಟಾಗುವ ಭೀತಿ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net