ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ಬೆಂಬಲಿ ಕೊಪ್ಪಳದಲ್ಲಿ ಪತ್ರ ಚಳವಳಿ ಆರಂಭವಾಗಿದೆ. ತಾಲೂಕಿನ ಕಲಿಕೇರಿ ಗ್ರಾಮದ ಯಲ್ಲಮ್ಮ ಎಂಬ ಮಹಿಳೆ ಪತ್ರ ಬರೆದು ಗಮನಸೆಳೆದಿದ್ದಾರೆ. ಈ ನಡುವೆ, ಬಿಜೆಪಿ ನಾಯಕರು ಕೂಡ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ.
ಯಲ್ಲಮ್ಮ ಎಂಬ ಮಹಿಳೆ ಪ್ರಧಾನಿಗೆ ಬರೆದ ಪತ್ರದಲ್ಲಿ, ನಾವು ಕಾಡುಸಿದ್ಧರ ಸಮುದಾಯದವರು.ಪೌರತ್ವ ತಿದ್ದುಪಡೆ ಕಾಯ್ದೆಯಿಂದ ನಮಗೆ ಅನುಕೂಲವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯಲ್ಲಮ್ಮ, ಅನುಕೂಲ ಆಗಿರುವ ಕಾರಣವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಅಭಿನಂದಿಸುತ್ತಿರುವುದಾಗಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇದೇ ವೇಳೆ, ಪೌರತ್ವ ಕಾಯ್ದೆ ಬಗ್ಗೆ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಬಿಜೆಪಿ ಹಮ್ಮಿಕೊಂಡಿದೆ. ಇದರ ನಿಮಿತ್ತವಾಗಿ ಕೊಪ್ಪಳ ನಗರದಲ್ಲಿ ಇಂದು ಮನೆ ಮನೆಗೆ ತೆರಳಿ ಕಾಯ್ದೆ ಬಗ್ಗೆ ಸಚಿವ ಸಿಸಿ ಪಾಟೀಲ್ ಜಾಗೃತಿ ಮೂಡಿಸುತ್ತಿದ್ದಾರೆ. ಇವರ ಜತೆಗೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಪಿ.ರಾಜೀವ್, ಹಾಲಪ್ಪ ಆಚಾರ್ ಹಾಗೂ ಪಕ್ಷದ ಕಾರ್ಯಕರ್ತರು ಕೂಡ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.