ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಙಉಟ ಸಭೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3 ಹಾಗೂ 44.65 ಕಿಲೋಮೀಟರ್ ಉದ್ದದ ಎರಡು ಎಲಿವೇಟೆಡ್ ಕಾರಿಡಾರ್ಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳ ಅಂದಾಜು ವೆಚ್ಚ 15,611 ಕೋಟಿ ರೂಪಾಯಿ ಎಂದು ಹೇಳಲಾಗಿದ್ದು, ಪ್ರಧಾನಿ ನೇತೃತ್ವದ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಲಾಗಿದೆ.
ಅದರಂತೆ ಕಾರಿಡಾರ್ 01ನೇ ಹಂತದ ಯೋಜನೆಯೂ ಜೆಪಿ ನಗರ 4 ನೇ ಹಂತದಿಂದ ಕೆಂಪಾಪುರ (ರಿಂಗ್ ರೋಡ್ ವೆಸ್ಟ್) 32.15 ಕಿ.ಮೀ ಉದ್ದ ಮತ್ತು ಕಾರಿಡಾರ್-2 ಹೊಸಹಳ್ಳಿಯಿಂದ ಕಡಬಗೆರೆ (ಮಾಗಡಿ ರಸ್ತೆ) 9.50 ಕಿ.ಮೀ ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ. ಈ ಎರಡು ಮೆಟ್ರೋ ಮಾರ್ಗಗಳಲ್ಲಿ ಒಟ್ಟು 32 ಹಾಗೂ 9 ನಿಲ್ದಾಣಗಳು ಇರಲಿವೆ.
ಇದನ್ನೂ ಓಧಿ: ಕೇಂದ್ರ ಸಚಿವ ಸೋಮಣ್ಣಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ; ಕಾರಣ ಇಷ್ಟೇ…
ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3 ನಗರದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಗಮನಾರ್ಹ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ಹಂತ-3 ನಗರದಲ್ಲಿ ಮೆಟ್ರೋ ರೈಲು ಜಾಲದ ಪ್ರಮುಖ ವಿಸ್ತರಣೆಯಾಗಿ ಕಾರ್ಯನಿರ್ವಹಿಸುತ್ತದೆ. ಬೆಂಗಳೂರು ನಗರದಲ್ಲಿ ಮೆಟ್ರೋ ರೈಲು ರಸ್ತೆ ಮಾರ್ಗಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡಿರುವ ಸಾರಿಗೆ ವ್ಯವಸ್ಥೆಯಾಗಿದ್ದು, ಸಂಚಾರ ದಟ್ಟಣೆ ಕಡಿತಕ್ಕೆ ಪ್ರಮುಖ ಕಾರಣವಾಗಿದೆ.
ಇದೀಗ ಹೊಸ ಮಾರ್ಗಗಳ ಸೇರ್ಪಡೆಯಿಂದ ನಗರದಲ್ಲಿ ಮೆಟ್ರೋ ಜಾಲ ವಿಸ್ತರಣೆಯಾಗುತ್ತಿದ್ದು, ಟ್ರಾಫಿಕ್ ಸಮಸ್ಯೆಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಮೆಟ್ರೋ ಜಾಲ ವಿಸ್ತರಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.