More

    ಎತ್ತಿನಹೊಳೆ ಯೋಜನೆಗೆ ಪಶು ಸಂಗೋಪನಾ ಇಲಾಖೆ ಭೂಮಿ ನೀಡಲು ಸಂಪುಟ ಒಪ್ಪಿಗೆ

    ಬೆಂಗಳೂರು: ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ಪಶು ಸಂಗೋಪನಾ ಇಲಾಖೆಗೆ ಸೇರಿದ 86 ಎಕರೆ ಜಮೀನು ನೀಡಲು ಒಪ್ಪಿಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

    ತಿಪಟೂರು ತಾಲೂಕಿನ ಕೋನೆಹಳ್ಳಿ ಸಮೀಪದ ಬಿದರೆಗುಡಿ ಕಾವಲ್​ನ ಸರ್ವೆ ನಂಬರ್ 3ರಲ್ಲಿ ಇರುವ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ ವ್ಯಾಪ್ತಿಗೆ ಸೇರಿದ ಜಮೀನನ್ನು ಸಾರ್ವಜನಿಕ ಉದ್ದೇಶಕ್ಕಾಗಿ ನೀಡಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

    ಎತ್ತಿನಹೊಳೆ ಯೋಜನೆಯ ಕಾಲುವೆ 100 ಕಿ.ಮೀ.ನಿಂದ 102 ಕಿ.ಮೀ.ವರೆಗೆ 86 ಎಕರೆ ಜಮೀನು ನೀಡಲಾಗುತ್ತಿದೆ. ಇದಕ್ಕಾಗಿ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿವಿ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮಗಳ ನಡುವೆ ಒಡಂಬಡಿಕೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.

    ಈ ಜಮೀನಿನಲ್ಲಿ ಪಶು ಸಂಗೋಪನಾ ಪಾಲಿಟೆಕ್ನಿಕ್ ಕಾಲೇಜು, ಜಾನುವಾರು ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಕೋನೆಹಳ್ಳಿ ವಿದ್ಯಾಲಯಗಳಿವೆ. ನೀರನ್ನು ಗುರುತ್ವಾಕರ್ಷಣೆಯ ಮೂಲಕ ತೆಗೆದುಕೊಂಡು ಹೋಗಲು ಪರ್ಯಾಯ ಮಾರ್ಗವಿಲ್ಲದ ಕಾರಣ ಜಮೀನು ನೀಡಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.

    2018ರ ಜು.16ರಂದು ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸಭೆಯಲ್ಲಿಯೇ ಜಮೀನು ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು ಎಂದಿದ್ದಾರೆ.

    ನಕ್ಸಲ್ ನಾಯಕಿ ಸೆರೆ: ಕೊಯಮತ್ತೂರಿನ ಆನೈಕಟ್ಟೆ ಬಳಿ ನಕ್ಸಲ್ ನಿಗ್ರಹಪಡೆ ಕಾರ್ಯಾಚರಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts