ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ಆರಂಭ

Siddaramaiah
Published on

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್​ ಸೇರಿದಂತೆ 8ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ಧಾರೆ.

ಇನ್ನು ಪ್ರಮಾಣ ವಚನ ಕಾರ್ಯಕ್ರಮ ಮುಗಿದ ಬಳಿಕ ಸಿಎಂ, ಕಾಂಗ್ರೆಸ್​ ಹಾಗೂ ವಿರೋಧ ಪಕ್ಷದ ನಾಯಕರು ಭಾಷಣ ಮಾಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ಧಾರೆ.

ಸಂಪುಟ ಸಭೆ ಆರಂಭ

ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ನೂತನ ಸಿಎಂ, ಡಿಸಿಎಂ ಹಾಗೂ ಸಚಿವರು ನೇರ ವಿಧಾನಸೌಧಕ್ಕೆ ಆಗಮಿಸಿದ್ದು ಪೂಜೆ ಸಲ್ಲಿಸಿ ಸಚಿವ ಸಂಪುಟ ಸಭೆ ಆರಂಭಿಸಿದ್ದಾರೆ.

ಈ ಹಿಂದೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಹೊರತರುವುದಾಗೊಇ ಆಶ್ವಾಸನೆ ನೀಡಿದ್ದರು. ಆ ನಿಟ್ಟಿನ್ಲಲಿ ಸಭೆ ಮಾಡಲಾಗುತ್ತಿದೆ.

ನಮಸ್ಕರಿಸಿದ ಡಿಕೆಶಿ

ಇನ್ನು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರವೇಶಿಸಿದ್ದು ವಿಶೇಷವಾಗಿತ್ತು.

DKS
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net