More

    ಸಹಕಾರ ಸಂಘಗಳ ಚುನಾವಣೆಗೆ ರಾಜ್ಯ ಸಚಿವ ಸಂಪುಟ ಅಸ್ತು

    ಬೆಂಗಳೂರು: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಸಹಕಾರ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

    ರಾಜ್ಯದ ಸಕ್ಕರೆ ಕಾರ್ಖಾನೆಗಳನ್ನು ಹೊರತುಪಡಿಸಿ ಉಳಿದ ಸಹಕಾರ ಸಂಘಗಳ ಚುನಾವಣೆ ನಡೆಸಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

    ಸಕ್ಕರೆ ಕಾರ್ಖಾನೆಗಳ ಸದಸ್ಯರ ಸಂಖ್ಯೆ 2-3 ಸಾವಿರದಷ್ಟಿರುವುದರಿಂದ ಕರೊನಾ ಸಂದರ್ಭದಲ್ಲಿ ಈ ಸಂಘಗಳ ಚುನಾವಣೆ ನಡೆಸುವುದು ಸಾಧುವಲ್ಲ ಎಂದು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು.

    ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಮಾತ್ರ ಇನ್ನು ಮುಂದೆ ದೂರ ಶಿಕ್ಷಣ ನೀಡಬೇಕು. ರಾಜ್ಯದ ಬೇರಾವುದೇ ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ನೀಡುವಂತಿಲ್ಲ. ಅಲ್ಲದೆ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಆದಾಯ ತೆರಿಗೆಗೆ ವಿನಾಯಿತಿ ನೀಡಬೇಕು ಎಂದೂ ತೀರ್ಮಾನಿಸಲಾಯಿತು.

    ಸಾರ್ವಜನಿಕರ ಪರ ಹೋರಾಟದಲ್ಲಿ ಭಾಗಿಯಾಗಿ ಮೊಕದ್ದಮೆ ಎದುರಿಸುತ್ತಿದ್ದ 53 ಪ್ರಕರಣಗಳನ್ನು ಸರ್ಕಾರ ವಾಪಸ್ ಪಡೆಯಬೇಕೆಂದು ನಿರ್ಣಯಿಸಲಾಯಿತು. ಗಣಪತಿ ವಿಸರ್ಜನೆ, ರೈತರ ಹೋರಾಟ ಮತ್ತಿತರ ಪ್ರಕರಣಗಳು ಇದರಲ್ಲಿ ಸೇರಿವೆ. ಯಾವುದೇ ವೈಯಕ್ತಿಕ ಪ್ರಕರಣಗಳಿಲ್ಲ.

    ರೇರಾ ಕಾಯ್ದೆ ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಲಾಯಿತು. ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳಲು ಈಗಿರುವ ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಈಗ ಸೇಲ್ ಅಗ್ರಿಮೆಂಟ್ ದಾಖಲೆಯಾಗಲಿದೆ. ಗ್ರಾಹಕರಿಗೆ ಅನುಕೂಲವೆಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

    ಸಿಎಆರ್, ಡಿಎಆರ್, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎ್ ಪೇದೆಗಳಾಗಿದ್ದವರು, ಸಿವಿಲ್ ಪೊಲೀಸ್ ನೇಮಕಕ್ಕೆ ಅರ್ಜಿ ಸಲ್ಲಿಸಿದರೆ ಶೇ.10 ಕೃಪಾಂಕ ಕೊಡಲು ತೀರ್ಮಾನ ಮಾಡಲಾಯಿತು. ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ನೇಮಕಾತಿ ಸಂದರ್ಭದಲ್ಲಿ ಶೇ.7 ಕೃಪಾಂಕ ನೀಡಲು ನಿರ್ಧಾರ ಮಾಡಲಾಯಿತು.

    ಕೇಜಿಗಟ್ಟಲೆ ಚಿನ್ನ, ಬೆಳ್ಳಿ, ಸೈಟು, ಫ್ಲ್ಯಾಟು, ಮನೆಗಳು… ಬ್ರಹ್ಮಾಂಡ ಭ್ರಷ್ಟಾಚಾರ ಬಯಲು

    6 ಮತ್ತು 7ನೇ ತರಗತಿಗೆ ಆನ್​ಲೈನ್​ ಶಿಕ್ಷಣ ಇರುತ್ತಾ-ಇಲ್ವಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts