More

    ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ಸ್ಫೋಟ, ಎನ್​ಐಎ ತನಿಖೆಗೆ ಕೋರ್ಟ್​ ಆದೇಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬುಧವಾರ (ಏ.17) ರಂದು ರಾಮನವಮಿ ಮೆರವಣಿಗೆ ವೇಳೆ ಬಾಂಬ್‌ ಸ್ಫೋಟಗೊಂಡ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್‌ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶಿಸಿದೆ.

    ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

    ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಘಟನೆಯ ತನಿಖೆಯನ್ನು ಸಿಬಿಐ ಮತ್ತು ಎನ್​ಐಎ ನಡೆಸಬೇಕು ಎಂದು ಕೋರಿ ಎರಡು ಸಾರ್ವಜನಿಕ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.

    ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಅವರನ್ನು ಒಳಗೊಂಡ ವಿಭಾಗೀಯ ಪೀಠದ ಭಟ್ಟಾಚಾರ್ಯ ಅವರು ಬಾಂಬ್‌ ಸ್ಫೋಟದ ತನಿಖೆ ಎನ್‌ಐಎ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ತನಿಖೆ ನಡೆಸುವಂತೆ ಆದೇಶಿಸಿದೆ.

    ಏಪ್ರಿಲ್ 13 ಮತ್ತು 17 ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿರುವ ಶಕ್ತಿಪುರ ಪ್ರದೇಶದಲ್ಲಿ ಸಾವಿರಾರು ಹಿಂದೂಗಳು ರಾಮನವಮಿ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ನಡೆದ ಘರ್ಷಣೆಯಲ್ಲಿ ಬಾಂಬ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಮುರ್ಷಿದಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ಮಾಡಿದ್ದರು.

    ಕೋಲ್ಕತ್ತಾ ಹೈಕೋರ್ಟ್‌ ಮುಂದಿನ ವಿಚಾರಣೆಯನ್ನು ಮೇ 10ಕ್ಕೆ ಮುಂದೂಡಿದೆ. ಈ ವೇಳೆ ಎನ್‌ಐಎ ತನಿಖೆಯ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

    ಏನಿದು ಘಟನೆ ?: ಪಶ್ಚಿಮ ಬಂಗಾಳದಲ್ಲಿ ಬುಧವಾರ (ಏಪ್ರಿಲ್‌ 17) ರಾಮನವಮಿ ಮೆರವಣಿಗೆ ವೇಳೆ ಬಾಂಬ್ ​ ಸ್ಫೋಟ ಸಂಭವಿಸಿತ್ತು, ಮೆರವಣಿಗೆ ನಡೆಸುವವರ ಮೇಲೆ ಕಲ್ಲುತೂರಾಟವನ್ನೂ ನಡೆಸಲಾಗಿತ್ತು. ಇದರಿಂದ ಹಲವರು ಗಾಯಗೊಂಡಿದ್ದರು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇನ್ನು ಶಂಕಾಸ್ಪದ ಸ್ಫೋಟ, ಕಲ್ಲುತೂರಾಟ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದರು. ಅಶ್ರುವಾಯು ಮೂಲಕ ಜನರನ್ನು ಚದುರಿಸಿದ್ದರು.

    ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts