ಹನೂರು: ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ಭಾನುವಾರ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಕರುವನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿದ್ದಾರೆ.
ಪಟ್ಟಣದ ಹೊರವಲಯದ ಎಲ್ಲೇಮಾಳ ಗ್ರಾಮಕ್ಕೆ ತೆರಳುವ ಮಾರ್ಗದ ಜಮೀನೊಂದರಲ್ಲಿ ಕರುವನ್ನು ಕಟ್ಟಿ ಹಾಕಲಾಗಿತ್ತು. ಆದರೆ ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಸಮೀಪದಲ್ಲಿದ್ದ 30 ಅಡಿ ಆಳ, 30 ಅಡಿ ಅಗಲದ ಬಾವಿಗೆ ಕರು ಆಕಸ್ಮಿಕವಾಗಿ ಬಿದ್ದಿದೆ. ಈ ಬಗ್ಗೆ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ತಿಳಿಸಿದರು. ಸ್ಥಳಕ್ಕಾಗಮಿಸಿದ ಠಾಣಾಧಿಕಾರಿ ಪ್ರಶಾಂತ್ ನಾಯಕ್, ಸಿಬ್ಬಂದಿ ನಾಗೇಶ್, ಲೋಕೇಶ್, ಬಸವರಾಜು ಹಾಗೂ ಹರ್ಷ ಅವರು ಸ್ಥಳೀಯರ ಸಹಕಾರ ಪಡೆದು ಕಾರ್ಯಾಚರಣೆ ನಡೆಸಿ ಕರುವನ್ನು ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿ ವಾರಸುದಾರರಿಗೆ ಒಪ್ಪಿಸಲಾಯಿತು.