ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಬಿಬಿಎಂಪಿ ಸಹಾಯವಾಣಿ 1533ಗೆ ಕರೆ ಮಾಡಿ.. BBMP Helpline

bengluru rain
Published on

ಬೆಂಗಳೂರು: (BBMP Helpline )ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಹಲವು ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಕೆಲವು ಕಡೆ ಮರಗಳು ಉರುಳಿ ಬಿದ್ದಿವೆ. ಹೀಗಾಗಿ BBMP ಸಹಾಯವಾಣಿಯನ್ನು ಆರಂಭಿಸಿದೆ.

ನಗರದಲ್ಲಿ ಮಳೆಯಿಂದ ಏನಾದರು ಸಮಸ್ಯೆಯಾಗಿದ್ದರೆ ಕೂಡಲೆ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533 ಗೆ ಕರೆ ಮಾಡಿ ದೂರು ನೀಡಬಹುದು. ಇದರ ಜೊತೆಗೆ ಪಾಲಿಕೆ 8 ವಲಯಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಲಾಗಿದೆ.

ಬೆಂಗಳೂರಿನ ವಾರ್ಡ್ ರಸ್ತೆಗಳು ಮತ್ತು ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛವಾಗಿಡಬೇಕು. ಮಳೆಯಿಂದ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಇರುವ ಸಮಸ್ಯೆಯನ್ನು ಬಗೆಹರಿಸಬೇಕು. ಪಾಲಿಕೆಯ ಎಲ್ಲಾ 8 ವಲಯಗಳ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು.

ನಾಗರಿಕರಿಂದ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಬೇಕು. ರಸ್ತೆಯಲ್ಲಿ ನಿಂತಿರುವ ನೀರು, ಧರೆಗುರುಳಿದ ಮರಗಳು, ರೆಂಬೆ ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಪಾಲಿಕೆಯ ಅಧಿಕಾರಿ/ಸಿಬ್ಬಂದಿ  ಸ್ಥಳದಲ್ಲಿದ್ದು ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಮಾರ್ಚ್ 27 ರವರೆಗೆ ಮೋಡ ಕವಿದ ವಾತಾವರಣ ಮತ್ತು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net