More

    ರೇಷನ್ ಎತ್ತುವಳಿ ಸ್ಥಗಿತಗೊಳಿಸಿದ ನ್ಯಾಯಬೆಲೆ ಅಂಗಡಿ ವರ್ತಕರು: ನ.7ರಂದು ಬೃಹತ್ ಪ್ರತಿಭಟನೆಗೆ ಕರೆ

    ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಕಾರ್ಡ್‌ದಾರರಿಗೆ ಹಣ ಬದಲು ಅಕ್ಕಿ ನೀಡುವಿಕೆ ಸೇರಿ ವಿವಿಧ ಸಮಸ್ಯೆಗಳ ಈಡೇರಿಕೆಗಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು, ರಾಜ್ಯಾದ್ಯಂತ ರೇಷನ್ ಎತ್ತುವಳಿಯನ್ನು ಸ್ಥಗಿತಗೊಳಿಸಿದ್ದಾರೆ.

    ಇದರಿಂದಾಗಿ ಕಾರ್ಡ್‌ದಾರರಿಗೆ ಪ್ರಸಕ್ತ ತಿಂಗಳು ರೇಷನ್ ಪಡೆಯಲು ವಿಳಂಬವಾಗುವ ಸಾಧ್ಯತೆ ಇದೆ. ಅಲ್ಲದೆ, ನ.7ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮಾಲೀಕರಿಗೆ ಸಂಘ ಕರೆ ಕೊಟ್ಟಿದ್ದು, ರಾಜ್ಯಾದ್ಯಂತ ಸಾವಿರಾರು ನ್ಯಾಯಬೆಲೆ ಅಂಗಡಿ ಮಾಲೀಕರು ಭಾಗಿಯಾಗುವ ನಿರೀಕ್ಷೆಯಿದೆ.

    ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜತೆ ಮೂರ್ನಾಲ್ಕು ಬಾರಿ ಸಭೆ ನಡೆದರೂ ಸಮಸ್ಯೆ ಈಡೇರಿಲ್ಲ.ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ ಜ್ವಲಂತವಾಗಿ ಕಾಡುತ್ತಿರುವ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿರುವ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ, ವಿಧಾನಸಭೆ ಚುನಾವಣೆ ಮುನ್ನ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಗ್ಯಾರಂಟಿ ಯೋಜನೆ ಘೋಷಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ಅಕ್ಕಿ ಸಿಗುತ್ತಿಲ್ಲ ಎಂದ ಕಾರಣವೊಡ್ಡಿ ಹಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ನಮಗೆ ಸಿಗಬೇಕಿದ್ದ ಕಮಿಷನ್ ಹಣವೂ ಸಿಗದಂತಾಯಿತು. ಹೀಗಾಗಿ, ಕಡ್ಡಾಯವಾಗಿ ಅಕ್ಕಿ ವಿತರಿಸಲು ಸಿಎಂ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಇದನ್ನೂ ಓದಿ: ಆಪರೇಷನ್​ ಕಮಲ ಆಗುತ್ತೆ ಅನ್ನೋದೆ ಮುರ್ಖತನದ ಪರಮಾವಧಿ: ಬಿ.ಸಿ. ಪಾಟೀಲ್​

    ಪಡಿತರ ವಿತರಣೆಗೆ ನೀಡಲಾಗುವ ಕಮಿಷನ್ ಹಣವನ್ನು ಹೆಚ್ಚಿಸಬೇಕು. 2022ರಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ಕಮಿಷನ್ ಹಣವನ್ನೂ ರಾಜ್ಯ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಪಡಿತರ ಸೋರಿಕೆ ತಡೆಗೆ ಸಗಟು ಮಳಿಗೆಗಳಲ್ಲಿ ಎಲೆಕ್ಟ್ರಾನಿಕ್ ಆಧಾರಿತ ತೂಕದ ಯಂತ್ರ ಅಳವಡಿಸಬೇಕು. ಆಹಾರಧಾನ್ಯ ವಿತರಣೆ ವೇಳೆ ಕಾರ್ಡ್‌ದಾರರಿಗೆ ಮುದ್ರಿತ ರಸೀದಿ ನೀಡುವಂತೆ ಹೊರಡಿಸಿರುವ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು. ಈ ಎಲ್ಲ ಸಮಸ್ಯೆಗಳ ಈಡೇರಿಕೆಗೆ ನಾವು ಪ್ರತಿಭಟನೆ ನಡೆಸಲಾಗುವುದು ಎಂದು ಕೃಷ್ಣಪ್ಪ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts