ಅಕ್ಷರವನ್ನು ಚಿತ್ರವಾಗಿಸುವ ಕಲೆ ಕ್ಯಾಲಿಗ್ರಫಿ

ಬಣಕಲ್: ಕ್ಯಾಲಿಗ್ರಫಿ ಅಕ್ಷರವನ್ನು ಚಿತ್ರವಾಗಿಸುವ ಅಪೂರ್ವ ಕಲೆಯಾಗಿದ್ದು , ಇದು ಅಕ್ಷರವನ್ನು ಕಲಾತ್ಮಕವಾಗಿ ಓದುಗರಿಗೆ ದಾಟಿಸುತ್ತದೆ ಎಂದು ಕಲಾವಿದ ಸುರೇಶ್ ಚಂದ್ರದತ್ತ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ಅಕ್ಷಯ ವಿಸ್ಮಯ ತೇಜಸ್ವಿ ಸಾಲುಗಳ ಕ್ಯಾಲಿಗ್ರಫಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅಕ್ಷರದ ಅರ್ಥವನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಕ್ಯಾಲಿಗ್ರಫಿಯ ಪಾತ್ರ ಹಿರಿದು. ಕೈ ಬರಹ ಕಡಿಮೆಯಾಗುತ್ತಿರುವ ಕಾಲಮಾನದಲ್ಲಿ ಕ್ಯಾಲಿಗ್ರಫಿ ಕಾರ್ಯಾಗಾರದಂತಹ ಕಾರ್ಯಕ್ರಮಗಳು ಕೈ ಬರಹದ ಕೌಶಲ್ಯವನ್ನು ಕಲಿಸುವಲ್ಲಿ ಸಹಕಾರಿಯಾಗುತ್ತವೆ ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯ ಪ್ರದೀಪ್ ಕೆಂಜಿಗೆ ಮಾತನಾಡಿ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ತೇಜಸ್ವಿ ಅವರ ವಿಭಿನ್ನ ಹಾಗೂ ವೈವಿಧ್ಯಮಯ ಆಸಕ್ತಿಗಳಿಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುತ್ತಿದೆ. ಅದರ ಭಾಗವಾಗಿ ಮುಂದಿನ ದಿನಗಳಲ್ಲಿ ಆರ್ಕಿಡೇರಿಯಂ ಮತ್ತು ಚಿಟ್ಟೆ ಉದ್ಯಾನವನ ನಿರ್ಮಾಣವಾಗಲಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ ರಮೇಶ್ ಮಾತನಾಡಿ, ತೇಜಸ್ವಿ ಅವರ ಸಾಲುಗಳ ಕ್ಯಾಲಿಗ್ರಫಿಗಳನ್ನು ಈ ಎರಡು ದಿನದ ಕಾರ್ಯಾಗಾರದಲ್ಲಿ ಕಲಾವಿದರು ರಚಿಸಲಿದ್ದು ಸೆಪ್ಟೆಂಬರ್ 8 ರಂದು ತೇಜಸ್ವಿ ಸಾಲುಗಳ ಕ್ಯಾಲಿಗ್ರಫಿ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ನೂರಕ್ಕೂ ಹೆಚ್ಚು ಕಲಿಕಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕ್ಯಾಲಿಗ್ರಫಿ ಕಲಾವಿದರಾದ ಸುರೇಶ್ ವಾಘ್ಮೋರ್, ಟಿ.ಬಿ.ಕೋಡಿಹಳ್ಳಿ, ಜಿ ಹರಿಕುಮಾರ್, ಮೋಹನ್ ಕುಮಾರ್, ಅನಿಮಿಷ್ ನಾಗನೂರ್, ಹರ್ಷ ಕಾವಾ, ವಿಶ್ವಕರ್ಮ ಆಚಾರ್ಯ, ತೇಜಸ್ವಿ ಒಡನಾಡಿಗಳಾದ ಬಾಪು ದಿನೇಶ್, ಕೀಟ ತಜ್ಞ ಡಾ.ಅವಿನಾಶ್, ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಮುಖ್ಯಸ್ಥರಾದ ಪ್ರಜ್ವಲ್, ಅನುದೀಪ್, ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್, ಸಂಗೀತಾ ಇದ್ದರು.

Share This Article

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…