More

    ದಾವಣಗೆರೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ ಎಷ್ಟು?

    ದಾವಣಗೆರೆ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    13 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಸೇವೆಯ ಹುದ್ದೆಗಳಿವೆ.
    ಕಾರ್ಯಕರ್ತೆ ಹುದ್ದೆಗೆ ಎಸ್​ಎಸ್​ಎಲ್​ಸಿ ಪಾಸಾಗಿರಬೇಕು. ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.

    ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮಿರ ಕೇಂದ್ರಾಡಳಿತಕ್ಕೆ ಒಂದು ವರ್ಷ ಪೂರೈಸಿದ ಸಂಭ್ರಮ; ವಿಶೇಷತೆ ಏನು? 

    ಸಾಮಾನ್ಯ ವರ್ಗದವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಪುರೈಸಿರಬೇಕು. ಕಾರ್ಯಕರ್ತೆ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಅಂದರೆ 45 ವರ್ಷ ಪೂರೈಸಿರಬೇಕು.
    ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಆಗಸ್ಟ್ 27 ರೊಳಗಾಗಿ ಆನ್​ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ www.davanagere.nic.in ಅಥವಾ https://anganwadirecruit.kar.nic.in ನೋಡಬಹುದು.

    ಪರಿಸ್ಥಿತಿ ತುಂಬಾ ಗಂಭೀರವಾಗಿದೆ… ಸರ್ಕಾರ ಉಳಿಯೋದು ಕಷ್ಟ ಇದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts