ಕುಶಾಲನಗರದಲ್ಲಿ ಮದ್ಯವರ್ಜನ ಶಿಬಿರಕ್ಕೆ ಚಾಲನೆ

camp
Published on

ಕುಶಾಲನಗರ:

ಮದ್ಯಪಾನ ಒಂದು ರೀತಿಯ ಪಿಡುಗಾಗಿದ್ದು ಮದ್ಯಪಾನ ಮುಕ್ತ ಸಮಾಜಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಹೇಳಿದರು. ಇಲ್ಲಿನ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಕೊಡವ ಸಮಾಜ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕೊಡವ ಸಮಾಜದಲ್ಲಿ ಏರ್ಪಡಿಸಿರುವ 1954ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದರು.

ಇಂದಿನ ಆಧುನಿಕ ಸಮಾಜದಲ್ಲಿ ಮದ್ಯಪಾನ ನಿಷೇಧದ ಅಗತ್ಯತೆ ತುಂಬ ಇದೆ. ಸಾರಾಯಿ ನಿಷೇದದಂತೆ ಮದ್ಯಪಾನವನ್ನು ಕೂಡ ಸಂಪೂರ್ಣ ನಿಷೇಧದ ಬಗ್ಗೆ ಕೂಡ ಸರ್ಕಾರ ಚಿಂತನೆ ಹರಿಸಬೇಕು. ಕುಟುಂಬದ ಯಜಮಾನನಾಗಿ, ಮಕ್ಕಳಿಗೆ ಮಾದರಿ ಸ್ಥಾನದಲ್ಲಿರುವ ವ್ಯಕ್ತಿ ಕೌಟುಂಬಿಕ ದೌರ್ಜನ್ಯಕ್ಕೆ ಕಾರಣರಾಗದೆ, ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗದಂತೆ ಗೌರವಯುತ ಜೀವನ ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಮಾತನಾಡಿ, ಮದ್ಯಪಾನ ಚಟಕ್ಕೆ ಬಲಿಯಾದವರು ಈ ಶಿಬಿರದ ಮೂಲಕ ಮನ ಪರಿವರ್ತನೆಗೊಂಡು, ಚಟ ಮುಕ್ತರಾಗಿ ಸಮಾಜಕ್ಕೆ ಹಾಗೂ ತಮ್ಮ ಕುಟುಂಬಕ್ಕೆ ಮಾದರಿ ವ್ಯಕ್ತಿಯಾಗಿ ಹೊರಹೊಮ್ಮಲಿ ಎಂದರು.

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ವಿ.ಡಿ. ಪುಂಡರೀಕಾಕ್ಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿವ್ಯ ಸಾನಿಧ್ಯ ವಹಿಸಿದ್ದ ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಮಂಜುನಾಥ ಸ್ವಾಮಿಗೆ ಪೂಜೆ ನೆರವೇರಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕಿ ಲೀಲಾವತಿ, ಅಖಿಲ ಕರ್ನಾಟಕ ಜನಜಾಗೃತಿ ಸಮಿತಿ ಕೊಡಗು ಜಿಲ್ಲಾಧ್ಯಕ್ಷ ಎ.ಟಿ. ರಂಗಸ್ವಾಮಿ, ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಕೊಡವ ಸಮಾಜ ಅಧ್ಯಕ್ಷ ಮನುನಂಜುAಡ, ಕರವೇ ಜಿಲ್ಲಾಧ್ಯಕ್ಷ ದೀಪಕ್ ನಾಯರ್, ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ನಾರಾಯಣ, ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್, ಯೋಜನೆಯ ಮೇಲ್ವಿಚಾರಕ ಕೆ.ಪಿ. ನಾಗರಾಜ್ ಸೇರಿದಂತೆ ಸಂಘಸAಸ್ಥೆಗಳ ಪ್ರಮುಖರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಸದಸ್ಯರು ಶಿಬಿರಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net