More

    ಮಕ್ಕಳ ಆರೋಗ್ಯ ತಪಾಸಣೆಗೆ ಅಭಿಯಾನ

    ಸವಣೂರ: ಮಕ್ಕಳ ಆರೋಗ್ಯ ತಪಾಸಣೆಗಾಗಿ ಏರ್ಪಡಿಸಿರುವ ಶಿಬಿರವು ಬೃಹತ್ ಅಭಿಯಾನವಾಗಿದ್ದು, ಇದನ್ನು ರಾಜ್ಯಾದ್ಯಂತ ಜಾರಿಗೊಳಿಸಲು ಆರೋಗ್ಯ ಸಚಿವರು ಚಿಂತನೆ ನಡೆಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪಿಂಚಣಿ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ, ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ, ವಾತ್ಸಲ್ಯ ಯೋಜನೆಯಡಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಹಾಗೂ ಪುರಸಭೆ ವತಿಯಿಂದ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಹಾವೇರಿ ಜಿಲ್ಲಾದ್ಯಂತ ಅಂದಾಜು 2.75 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದೆ. ಮುಂದಿನ ವಾರ ಆರೋಗ್ಯ ತಪಾಸಣೆ ಶಿಬಿರ ಮುಕ್ತಾಯಗೊಳ್ಳಲಿದೆ ಎಂದರು.

    ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗಿದೆ. ಈಗಾಗಲೇ ಶೇ. 80ರಷ್ಟು ರಸ್ತೆ, ಗಟಾರ ನಿರ್ವಿುಸಲಾಗಿದೆ. ಪ್ರತಿ ಅಂಗನವಾಡಿ ಕೇಂದ್ರದ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸ್ಥಳೀಯ ತಾಲೂಕು ಆಸ್ಪತ್ರೆಯ ಸಬಲೀಕರಣ ಕೈಗೊಳ್ಳಲಾಗುತ್ತಿದೆ. ಸರ್ಕಾರ ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

    ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ, ಅಧ್ಯಕ್ಷೆ ಶೈಲಾ ಮುದಿಗೌಡ್ರ, ಇಂಜಿನಿಯರ್ ನಾಗರಾಜ ಮಿರ್ಜಿ, ಸಿಡಿಪಿಒ ಅಣ್ಣಪ್ಪ ಹೆಗಡೆ, ಸದಾನಂದ ಕೆಮ್ಮಣಕೇರಿ, ಮಹೇಶ ಮುದಗಲ್, ರೇಖಾ ಬಂಕಾಪೂರ, ಪೀರಅಹ್ಮದ ಗವಾರಿ, ಅಜೀಂಬೇಗ ಮಿರ್ಜಾ, ಎಫ್.ವಿ. ಪಠಾಣ, ಮಹದೇವ ಮಹೇಂದ್ರಕರ, ಗಂಗಾಧರ ಬಾಣದ, ಸುಭಾಸ ಗಡೆಪ್ಪನವರ, ಮಂಜುನಾಥ ಗಾಣಗೇರ, ಚನ್ನಬಸಯ್ಯ ದುರ್ಗದಮಠ, ಮಾಲತೇಶ ಹಾವಣಗಿ, ಖಲಂದರಅಹ್ಮದ ಅಕ್ಕೂರ, ಸಂತೋಷ ಗುಡಿಸಾಗರ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts