ಕೇಂದ್ರದ ಮಧ್ಯ ಪ್ರವೇಶಕ್ಕೆ ಕ್ಯಾಂಪ್ಕೊ ಆಗ್ರಹ

PRESIDENT PHOTO
Published on

ಮಂಗಳೂರು : ವಿಶ್ವ ಆರೋಗ್ಯ ಸಂಸ್ಥೆಯು ಅಡಕೆ ಕ್ಯಾನ್ಸರ್‌ಕಾರಕ ಎಂದು ಸಾಬೀತು ಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ ಪ್ರಕಟಿಸಿದೆ. ಇಂತಹ ವರದಿಗಳನ್ನು ತಿರುಚಿರುವ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಎಆರ್‌ಸಿ ವಿರುದ್ಧ ತುರ್ತು ಕ್ರಮ ವಹಿಸಬೇಕೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಮೂಲ ಸಂಶೋಧನಾ ವರದಿಗಳಲ್ಲಿ ತಂಬಾಕು ಸೇವನೆಯ ಪರಿಣಾಮದ ಕುರಿತು ಕೇಂದ್ರೀಕರಿಸಿ ಸಂಶೋಧನೆ ನಡೆಸಲಾಗಿತ್ತು, ಹಾಗಿದ್ದರೂ ಅಡಿಕೆ ಕ್ಯಾನ್ಸರ್‌ಕಾರಕವೆಂದು ಬಿಂಬಿಸುವ ಸಲುವಾಗಿ ಮಾದರಿ ಸಂಖ್ಯೆ ಮತ್ತು ಶೀರ್ಷಿಕೆಯನ್ನು ತಿರುಚಿ ವರದಿ ಪ್ರಕಟಿಸಿರುವ ವವಿಶ್ವ ಆರೋಗ್ಯ ಸಂಸ್ಥೆ ಮತ್ತು ಐಎಆರ್‌ಯ ಕ್ರಮ ಅಕ್ಷಮ್ಯ. ಇದು ಅಡಿಕೆ ಕೃಷಿಯನ್ನೆ ಜೀವನಾಧಾರವಾಗಿ ನಂಬಿರುವ ರೈತರ ಬದುಕಿಗೆ ಬಲವಾದ ಹೊಡೆತ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯು ಅಡಕೆಯನ್ನು ವರ್ಗೀಕರಿಸುವುದರ ಕುರಿತು ನ್ಯಾಯೋಚಿತ ವಿಮರ್ಶೆ
ನಡೆಸಿ ರೈತರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಡಕೆ ಲಕ್ಷಾಂತರ ಜನರ ಜೀವನದ ಆಧಾರಸ್ಥಂಭ. ಅದರ ತಪ್ಪಾದ ವರ್ಗೀಕರಣದಿಂದ ಅದನ್ನೇ ನಂಬಿ ಬದುಕುತ್ತಿರುವ ಜನರ ಜೀವನ ಹಾಳಾಗುವುದಲ್ಲದೆ ,ಅಡಿಕೆಯ ವೈಜ್ಞಾನಿಕ ಉಪಯೋಗಗಳಿಂದ ಸಮಾಜ ವಂಚಿತವಾಗಲಿದೆ .ಲಕ್ಷಾಂತರ ಜನರಿಗೆ ಜೀವನ ಕಟ್ಟಿ ಕೊಟ್ಟಿರುವ ಅಡಕೆಯ ತಪ್ಪು ವರ್ಗೀಕರಣವನ್ನು ಸರಿಪಡಿಸಿ ರೈತರ ಬದುಕಿನ ದಾರಿದೀಪವಾಗುವಂತೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net