

ವಿಜಯವಾಣಿ ಸುದ್ದಿಜಾಲ ಕಡಬ
ಒಂದು ದೇಶಕ್ಕೆ ಆಂತರಿಕ ಶತ್ರುಗಳು ಎಷ್ಟು ಅಪಾಯವೋ ಅಷ್ಟೇ ಅಪಾಯಕಾರಿಯಾಗಿರುವುದು ವ್ಯಕ್ತಿಗೆ ತನ್ನೊಳಗಿನ ಮದ್ಯ ವ್ಯಸನ. ಇಂತಹ ವ್ಯಸನದ ವಿರುದ್ಧ ಶಿಬಿರದ ಮೂಲಕ ಹೋರಾಟ ಮಾಡುವ ಶಿಬಿರಾರ್ಥಿಗಳು ಕೂಡ ಯೋಧರಂತೆ. ಒಬ್ಬ ವ್ಯಕ್ತಿಯ ಕುಡಿತ ಒಂದು ಕುಟುಂಬವನ್ನು ಪಡೆದರೆ ಅದೇ ಕುಡಿತದ ಚಟ ಬಿಟ್ಟಾಗ ಕುಟುಂಬವನ್ನು ಬೆಸೆಯುತ್ತದೆ ಎಂದು ಜಾರಿ ನಿರ್ದೇಶನಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಮಹೇಶ್ ಕಜೆ ಹೇಳಿದರು.
ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಹಾಗೂ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 22 ರಿಂದ 29ರವರೆಗೆ ಪುಣ್ಚಪ್ಪಾಡಿ ನೇರೋಳ್ತಡ್ಕ ವಿನಾಯಕ ನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ನಡೆದ 1843ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗುರುವಾರ ಮಾತನಾಡಿದರು.
ಮದ್ಯವರ್ಜನಾ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಚಿನ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮಾಜಿ ನಿರ್ದೇಶಕ ಭಾಸ್ಕರ ಕೋಡಿಂಬಾಳ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ಕಡಬ ತಾಲೂಕು ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವೊಳಿಕೆ, ಸವಣೂರು ಗ್ರಾಪಂ ಉಪಾಧ್ಯಕ್ಷೆ ಜಯಶ್ರೀ, ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ, ಜನಜಾಗೃತಿ ವೇದಿಕೆಯ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಗೋಳಿತೊಟ್ಟು ವಲಯಾಧ್ಯಕ್ಷ ನೋಣಯ್ಯ ಪೂಜಾರಿ, ಶಿಬಿರದ ವ್ಯವಸ್ಥಾಪನ ಸಮಿತಿ ಕೋಶಾಧಿಕಾರಿ ಚೇತನ್ ಕುಮಾರ್ ಕೋಡಿಬೈಲು, ಗ್ರಾಮಾಭಿವೃದ್ಧಿ ಯೋಜನೆ ಪುಣ್ಚಪ್ಪಾಡಿ ಒಕ್ಕೂಟ ಅಧ್ಯಕ್ಷ ವಿಜಯ ಗೌಡ ಕುಚ್ಚೆಜಾಲು, ಶಿಬಿರದ ಆರೋಗ್ಯ ಸಹಾಯಕಿ ನೇತ್ರಾವತಿ ಇದ್ದರು.
77 ಮಂದಿ 8 ದಿನಗಳ ಶಿಬಿರದಲ್ಲಿ ಭಾಗವಹಿಸಿದ್ದರು. ಬೆಳಗ್ಗೆ ಕುಟುಂಬ ದಿನ ನಡೆಯಿತು. ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿದರು. ಶಿಬಿರ ಕಾರ್ಯದರ್ಶಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ವಂದಿಸಿದರು. ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು.
ಶಿಬಿರದ ಯೋಗ ಶಿಕ್ಷಕ ಜಯಂತ ವೈ ಅವರನ್ನು ಗೌರವಿಸಲಾಯಿತು. ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ, ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು,ಪೂರ್ಣಿಮಾ ಮಹೇಶ್ ಅವರನ್ನು ಸನ್ಮಾನಿಸಲಾಯಿತು.