24.9 C
Bangalore
Wednesday, December 11, 2019

ಚಳಿಗಾಲ ಬಂತೆಂದು ಬೆಚ್ಚಗೆ ಮಲಗಬೇಡಿ… ಕೇವಲ 5 ನಿಮಿಷ ರನ್ನಿಂಗ್​ ಮಾಡಿ 5 ಆರೋಗ್ಯ ಫಲಗಳನ್ನು ಪಡೆಯಿರಿ!

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಚಳಿಗಾಲ ಬಂತೆಂದರೆ ಸಾಕು ಮನೆ ಬಿಟ್ಟು ಹೊರ ಹೋಗುವುದೇ ಕಷ್ಟ ಅಂತಹುದರಲ್ಲಿ ವ್ಯಾಯಾಮ ಮಾಡುವುದೆಂದರೆ ಹೇಳತೀರಲಾಗದು. ಇನ್ನು ಚಳಿಗಾಲದಲ್ಲಿ ಹಲವರು ರುಚಿಯಾದ ಅದರಲ್ಲೂ ಹೆಚ್ಚಿನ ಕ್ಯಾಲರಿಯುಳ್ಳ ಆಹಾರವನ್ನೇ ಸೇವಿಸುವುದು ಹೆಚ್ಚು. ಹೀಗಾಗಿ ಇದು ತೂಕ ಹೆಚ್ಚಳಕ್ಕೂ ಕಾರಣವಾಗುತ್ತದೆ. ಚಳಿಗಾಲದಲ್ಲಿ ವ್ಯಾಯಾಮ ಮರೆತರೆ ಗಂಭೀರವಾದ ಆರೋಗ್ಯ ಸಮಸ್ಯೆಗೂ ಕಾರಣವಾಗುತ್ತದೆ. ಚಳಿಗಾಲದಲ್ಲಿ ಅನವಶ್ಯಕ ತೂಕ ಹೆಚ್ಚಳ ಮತ್ತು ಅರೋಗ್ಯ ಸಮಸ್ಯೆ ಕಾಡಬಾರದೆಂದರೆ ಏನು ಮಾಡಬೇಕೆಂದು ಪ್ರಶ್ನಿಸುವವರಿಗೆ ಕೇವಲ 5 ನಿಮಿಷ ರನ್ನಿಂಗ್​ ಉತ್ತರವಾಗಿದೆ. ಐದು ನಿಮಿಷ ಓಡುವುದರಿಂದ ನೀವು 5 ರೀತಿಯ ಆರೋಗ್ಯ ಫಲವನ್ನು ಅನುಭವಿಸಬಹುದಾಗಿದೆ.

1. ಕ್ಯಾಲರಿ ಕಡಿಮೆ ಮಾಡಲು ಸಹಕಾರಿ
ಕೆಲವೊಂದು ವ್ಯಾಯಾಮಗಳನ್ನು ಮಾಡುವುದಕ್ಕಿಂತ ಮಾಡದಿರುವುದೇ ಒಳಿತು. ಆದರೆ, ರನ್ನಿಂಗ್​ ಮಾತ್ರ ಒಳ್ಳೆಯ ವ್ಯಾಯಾಮವಾಗಿದ್ದು, ಇದನ್ನು ಮಾಡುವುದರಿಂದ ಇಡೀ ದೇಹವು ಕೆಲಸ ನಿರ್ವಹಿಸಿದಂತಾಗುತ್ತದೆ. ಕ್ಯಾಲರಿ ಬರ್ನ್​ ಮಾಡಲು ಉಪಯುಕ್ತವಾಗಿದೆ. ಆದರೆ, ನೀವು ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವುದಾದರೆ 5 ನಿಮಿಷದ ರನ್ನಿಂಗ್​ ಸಾಕಾಗುವುದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಹೆಚ್ಚಿನ ಕ್ಯಾಲರಿ ಬರ್ನ್​ ಮಾಡುವ ಅವಶ್ಯಕತೆ ಇದ್ದು, ಹೆಚ್ಚು ರನ್ನಿಂಗ್​ ಅವಶ್ಯಕತೆ ಇದೆ.

2. ಮನಸ್ಥಿತಿಯನ್ನು ಸಮತೋಲನದಲ್ಲಿಡಲು ಉಪಕಾರಿ
ವ್ಯಾಯಾಮವು ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ, ಮಾನಸಿಕ ಆರೋಗ್ಯಕ್ಕೂ ಉಪಕಾರಿಯಾಗಿದೆ. ರನ್ನಿಂಗ್​ ಮಾಡುವುದರಿಂದ ಹೊಸ ಹುರುಪನ್ನು ನೀಡಿ ಮನಸ್ಸು ಲವಲವಿಕೆಯಿಂದ ಇರುವಂತೆ ನೋಡಿಕೊಳ್ಳುತ್ತದೆ. ಇದರಿಂದ ಖಿನ್ನತೆಯಂತಹ ರೋಗವು ದೂರವಾಗುತ್ತದೆ. ಒಂದು ವೇಳೆ ನಿಮ್ಮಲ್ಲಿ ಭಾರವಾದ ಮನಸ್ಥಿತಿ ಇದ್ದರೆ, ವೇಳಾ ಪಟ್ಟಿ ಸಿದ್ಧಪಡಿಸಿಕೊಂಡು ಪ್ರತಿದಿನ ಕೇಲವ 5 ನಿಮಿಷ ಓಡಲು ಶುರು ಮಾಡಿದರೆ ಮನಸ್ಸಿನ ಭಾರ ಇಳಿಯಲಿದೆ.

3. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ಮಧುಮೇಹ ರೋಗಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ಹೀಗಾಗಿ ಪ್ರತಿನಿತ್ಯ 5 ನಿಮಿಷ ಓಡಿದರೆ ಸಕ್ಕರೆ ಮಟ್ಟವನ್ನು ಹತೋಟಿಗೆ ತರಬಹುದು. ಇದಲ್ಲದೆ, ಇತರೆ ಆರೋಗ್ಯ ಫಲವನ್ನು ಮಧುಮೇಹ ರೋಗಿಗಳು ರನ್ನಿಂಗ್​ ಮಾಡುವುದರಿಂದ ಪಡೆಯಬಹುದು.

4. ನಿದ್ದೆಯನ್ನು ಸುಧಾರಿಸುತ್ತದೆ
ಆಧುನಿಕ ಜಗತ್ತಿನಲ್ಲಿ ಸಾಕಷ್ಟು ಮಂದಿ ನಿದ್ರಾಹೀನತೆಯಂತಹ ರೋಗಗಳಿಂದ ಬಳಲುತ್ತಿರುವುದು ಸಾಮಾನ್ಯವಾಗಿದೆ. ನಿದ್ದೆಯ ಕೊರತೆ ಹಲವು ಆರೋಗ್ಯ ತಂದರೆಗಳಿಗೆ ಸೇತುವೆಯಾಗಿದೆ. ಹೀಗಾಗಿ ಒಳ್ಳೆಯ ಆರೋಗ್ಯ ಹಾಗೂ ಮನಸ್ಸಿಗೆ ನಿಗದಿತ ನಿದ್ದೆಯು ಅವಶ್ಯಕವಾಗಿದೆ. ಹೀಗಾಗಿ ಪ್ರತಿದಿನ 5 ನಿಮಿಷ ಓಡುವುದರಿಂದ ಉತ್ತಮ ನಿದ್ದೆಯನ್ನು ಅನುಭವಿಸಬಹುದಾಗಿದೆ.

5. ರಕ್ತದೊತ್ತಡ ನಿವಾರಣೆಗೆ ಸಹಕಾರಿ
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಸಾಮಾನ್ಯ ತೊಂದರೆಯಾಗಿದೆ. ಹೀಗಾಗಿ ವಯಸ್ಸಿನ ವ್ಯತ್ಯಾಸವಿಲ್ಲದೇ ಸಾಕಷ್ಟು ಮಂದಿ ಹೃದಯಘಾತಕ್ಕೆ ಒಳಗಾಗಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಧಿಕ ರಕ್ತದೊತ್ತಡವು ಅನೇಕ ಗಂಭೀರ ತೊಂದರೆಗಳಿಗೂ ಕಾರಣವಾಗುತ್ತದೆ. ಓಡುವುದರಿಂದ ಇಡೀ ದೇಹ ಲವಲವಿಕೆಯಿಂದ ಕೂಡಿರುತ್ತದೆ. ಇದು ಹೃದಯ ಆರೋಗ್ಯಕ್ಕೂ ಕಾರಣವಾಗಿ, ರಕ್ತದೊತ್ತಡದ ಪ್ರಮಾಣವನ್ನು ತಗ್ಗಿಸುತ್ತದೆ. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...