More

    ನಿಮ್ಮ ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಫೋಟೋದಲ್ಲಿರುವ ಚಿರತೆ ಪತ್ತೆಹಚ್ಚಬಲ್ಲರು!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ಅಮೆರಿಕದಲ್ಲಿ ಗಂಡ, ಇಂಡಿಯಾದಲ್ಲಿ ಪತ್ನಿ ಸಾವು: ವಿಧಿಯಾಟಕ್ಕೆ ದಂಪತಿ ಬದುಕು ದುರಂತ ಅಂತ್ಯ

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the Leapord 1

    ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ವಿಶಾಲ ಅರಣ್ಯ ಪ್ರದೇಶದ ನಡುವೆ ಇರುವ ಎರಡು ಮರಗಳನ್ನು ನೋಡಬಹುದು. ಮರಳ ಒಂದು ಬದಿಯಲ್ಲಿ ಕಾರೊಂದು ನಿಂತಿದೆ. ಅದೇ ಮರಗಳ ನಡುವೆ ಚಿರತೆಯಿಂದ ಅಡಗಿದೆ. ಅದು ಎಲ್ಲಿದೆ ಎಂದು ಪತ್ತೆಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ನಮ್ಮ ಕಣ್ಣುಗಳನ್ನೇ ಗೊಂದಲಕ್ಕೆ ದೂಡುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಚಿರತೆ ಫೋಟೋದ ಯಾವ ಭಾಗದಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

     ಇದನ್ನೂ ಓದಿ: ಒಳಉಡುಪಿನಲ್ಲಿ ನೋಡುವ ಬಯಕೆಯಂತೆ! ಬಾಲಿವುಡ್​ ಚಿತ್ರರಂಗದ ಮತ್ತೊಂದು ಕರಾಳ ಕತೆ ಬಿಚ್ಚಿಟ್ಟ ಪಿಗ್ಗಿ

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಚಿರತೆಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಚಿರತೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the Leapord 2

    ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಅಡಗಿರುವ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಪತ್ತೆ ಹಚ್ಚುವಿರಾ?

    ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ 10 ಸೆಕೆಂಡ್​ನಲ್ಲಿ ಬಾವಲಿಗಳ ಮಧ್ಯೆ ಇರುವ ಬೆಕ್ಕು ಪತ್ತೆ ಹಚ್ಚಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts