VIDEO | ಬೆಂಗಳೂರು ಮೆಟ್ರೋದಲ್ಲಿ ಫ್ರೀ ಆಗಿ ಪ್ರಯಾಣಿಸಬಹುದಾ?; BMRCL ಹೇಳುವುದೇನು..

metro bng
Published on

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಗರದ ಅನೇಕ ಸ್ಥಳಗಳಿಗೆ ಸಂಪರ್ಕ ಒದಗಿಸುತ್ತದೆ. ಟ್ರಾಫಿಕ್​​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಹೆಚ್ಚಿನವರು ಮೆಟ್ರೋ ಪ್ರಯಾಣವನ್ನು ಆಯ್ಕೆ ಮಾಡುತ್ತಾರೆ. ಮೆಟ್ರೋದಲ್ಲಿ ಪ್ರಯಾಣಿಸಲು ಟೋಕನ್​ ಅಥವಾ ಮೆಟ್ರೋ ಕಾರ್ಡ್‌ ​ಇರುವುದು ಕಡ್ಡಾಯವಾಗಿದೆ. ಆದರೆ ಇಲ್ಲೊಬ್ಬ ಮಾತ್ರ ಉಚಿತವಾಗಿ ಮೆಟ್ರೋ ಪ್ರಯಾಣ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾನೆ.

ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಇತ್ತೀಚೆಗೆ ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಮೆಟ್ರೋದಲ್ಲಿ ಯಾವುದೇ ಟಿಕೆಟ್‌ ಅಥವಾ ಮೆಟ್ರೋ ಕಾರ್ಡ್‌ ಇಲ್ಲದೆ ಫ್ರೀಯಾಗಿ ಓಡಾಡಿದ್ದಾರೆ. ಇವರ ಈ ವಿಡಿಯೋ ಸಹ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ವಿಡಿಯೋದಲ್ಲಿ ಏನಿದೆ?: ಭಾರತದಲ್ಲಿ ಮೆಟ್ರೋವನ್ನು ಉಚಿತವಾಗಿ ಪಡೆಯುವುದು ಹೇಗೆ ಎಂದು ನಾನು ನಿಮಗೆ ಕಲಿಸುತ್ತೇನೆಂದು ಫಿಡಿಯಾಸ್, ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗೆ ಪ್ರವೇಶ ಪಡೆಯುವ ಮೊದಲು ಮತ್ತು ನಿಲ್ದಾಣದಿಂದ ನಿರ್ಗಮಿಸುವ ಮೊದಲು ತೆರವುಗೊಳಿಸಬೇಕಾದ ಗೇಟ್ ಅನ್ನು ಜಿಗಿಯುವುದನ್ನು ಕಾಣಬಹುದು. ಸ್ಮಾರ್ಟ್‌ಕಾರ್ಡ್ ಅಥವಾ ಟೋಕನ್ ಅನ್ನು ಟ್ಯಾಪ್ ಮಾಡದೆ ಪ್ರಯಾಣಿಸಿದ್ದಾರೆ. ಭಾರತೀಯ ಮೆಟ್ರೋಲ್ಲಿ ಹೇಗೆ ನುಸುಳುವುದು' ಎಂಬ ಶೀರ್ಷಿಕೆಯ ವಿಡಿಯೋವನ್ನು ಇನ್​ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮಾತನಾಡಿ, ''ಒಬ್ಬ ವ್ಯಕ್ತಿಯು ಟಿಕೆಟ್ ಇಲ್ಲದೆ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿ ಮೆಟ್ರೋದಲ್ಲಿ ಪ್ರಯಾಣಿಸುವ ವೀಡಿಯೊವನ್ನು ನಾನು ನೋಡಿದ್ದೇನೆ. ಅಂತಹ ನಡವಳಿಕೆಯು ಸ್ವೀಕಾರಾರ್ಹವಲ್ಲ. ಆ ವ್ಯಕ್ತಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ನಾನು ಸಂಬಂಧಿಸಿದ ಅಧಿಕಾರಿಯನ್ನು ಕೇಳಿದ್ದೇನೆ'' ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net