More

    ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಕಲ್ಲು ಬಂಡೆಗಳ ನಡುವೆ ಇರುವ “ಪಕ್ಷಿ” ಪತ್ತೆಹಚ್ಚಬಲ್ಲರು!

    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ದೃಷ್ಟಿ ಭ್ರಮೆ ಎಂದರೇನು?

    ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

    ಇದನ್ನೂ ಓದಿ: ನಟ ಸುದೀಪ್​ ಕಾಂಗ್ರೆಸ್ ಪರ ಕೂಡ ಕೆಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡ್ತಾರೆ: ಡಿ.ಕೆ. ಶಿವಕುಮಾರ್​ ಹೇಳಿಕೆ

    ಮೋಜಿನ ಮಾರ್ಗ

    ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

    ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

    Spot the bird 1

    ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಕಲ್ಲಬಂಡೆಯನ್ನು ಚಿತ್ರಣವನ್ನು ನೋಡಬಹುದು. ಕಲ್ಲುಬಂಡೆಗಳ ನಡುವೆ ಒಂದು ಪಕ್ಷಿ ಕುಳಿತಿದೆ. ಅದನ್ನು ಪತ್ತೆ ಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಬಂಡೆಯ ಬಣ್ಣ ಮತ್ತು ಪಕ್ಷಿಯ ಬಣ್ಣಕ್ಕೂ ಸಾಮ್ಯತೆ ಇದ್ದು, ನೋಡುಗರಿಗೆ ಗೊಂದಲು ಉಂಟು ಮಾಡುತ್ತದೆ. ತಕ್ಷಣಕ್ಕೆ ಪಕ್ಷಿ ಎಲ್ಲಿದೆ ಎಂದು ಗೊತ್ತಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ, ಪಕ್ಷಿ ಕಾಣಿಸುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಪಕ್ಷಿ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

    ಇದನ್ನೂ ಓದಿ: ಕಾಂಗ್ರೆಸ್ ಒಂದು ರಿವರ್ಸ್ ಗೇರ್ ಸರ್ಕಾರ, ಅದರಿಂದ ಯಾವ ಅಭಿವೃದ್ಧಿಯೂ ಸಾಧ್ಯವಿಲ್ಲ: ಅಮಿತ್​ ಶಾ ವಾಗ್ದಾಳಿ

    10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಪಕ್ಷಿಯನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಪಕ್ಷಿಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

    Spot the Bird 2

    ನಟಿ ಜಿಯಾ ಖಾನ್​ ಸಾವು ಪ್ರಕರಣದಲ್ಲಿ ನಟ ಸೂರಜ್​ ಪಾಂಚೋಲಿ ಖುಲಾಸೆ: ಮುಂಬೈ ಸಿಬಿಐ ಕೋರ್ಟ್​ ಆದೇಶ

    5 ನಿಮಿಷ ಮಾತಾಡಲು 10 ಸಾವಿರ ರೂ.: ಒಳ್ಳೇ ಹುಡ್ಗೀರು ಇತಿಹಾಸ ಸೃಷ್ಟಿಸಲಾರರು ಎಂದ ನಟಿ ಕಿರಣ್​

    ಕಥೆ ಕೇಳಿ ಕೈ ಮುಗಿದಿದ್ದೆ:  ರಾಘವೇಂದ್ರ ಸ್ಟೋರ್ಸ್​ನಲ್ಲಿ ಚಿಕ್ಕಿಯ ಮೂಗುತಿ ಧರಿಸಿದ ಶ್ವೇತಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts