More

    ನಾಲೆಗೆ ಸಮರ್ಪಕ ನೀರು ಹರಿಸಲಿ

    ಮಾನ್ವಿ: ಮಾನ್ವಿ ಮತ್ತು ಸಿರವಾರ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಜೋಳ, ಹತ್ತಿ, ಮೆಣಸಿನಕಾಯಿ ಸೇರಿ ಇತರ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಒತ್ತಾಯಿಸಿದರು.

    ಕಪಗಲ್ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿ ಶುಕ್ರವಾರ ಮಾತನಾಡಿದರು. ಮಳೆ ಕೊರತೆಯಿಂದ ತೊಗರಿ, ಹತ್ತಿ, ಮೆಣಸಿನಕಾಯಿ, ಜೋಳ, ಭತ್ತ, ಸೂರ್ಯಕಾಂತಿ ಬೆಳೆ ಸಂಪೂರ್ಣ ನಾಶವಾಗಿದೆ. ತುಂಗಭದ್ರಾ ಎಡದಂಡೆ ಕಾಲುವೆಗೆ ಸರಿಯಾದ ಸಮಯಕ್ಕೆ ನೀರು ಬಿಡದ ಕಾರಣ ಬೆಳೆ ಬಾಡಿವೆ. ಮಾನ್ವಿ ಮತ್ತು ಸಿರವಾರ ತಾಲೂಕಿನಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಭತ್ತ ಬೆಳೆದಿದ್ದು, ಸಮರ್ಪಕವಾಗಿ ನೀರು ಬಿಡಬೇಕು ಎಂದು ಒತ್ತಾಯಿಸಿದರು.

    ಮಾಜಿ ಸಚಿವ ವೆಂಕಟರಾವ ನಾಡಗೌಡ, ನಾಗರಾಜ ಭೋಗಾವತಿ, ರವಿಕುಮಾರ್, ಬಸನಗೌಡ ಬೆಟ್ಟದೂರು, ಶರಣಗೌಡ ಗವಿಗಟ್ಟು, ಸುಭಾನ್‌ಬೇಗ್, ಬಸನಗೌಡ ಭೋಗಾವತಿ, ಬಜಾರ್ ಈರಪ್ಪ, ಬಸವರಾಜ ನಾಯಕ, ದೇವೇಗೌಡ, ಸಿದ್ದಪ್ಪ, ದೊಣ್ಣಿ ಮಲ್ಲಯ್ಯ ಇತರರು ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts