ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ

ಹಿರೇಬಾಗೇವಾಡಿ: ರಾಜ್ಯ ಸರ್ಕಾರಿ ನೌಕರರ ವಿರೋಧಿ ಎನ್‌ಪಿಎಸ್ ಯೋಜನೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಬಂದ ಸಾವಿರಾರು ನೌಕರರು ಹಿರೇಬಾಗೇವಾಡಿ ಗ್ರಾಮದ ಬಸವೇಶ್ವರ ವೃತ್ತದಿಂದ ಸುವರ್ಣ ವಿಧಾನಸೌಧಕ್ಕೆ ಬುಧವಾರ ಪಾದಯಾತ್ರೆ ನಡೆಸಿದರು.

2016ರ ಏ.1ರಿಂದ ಸೇವೆಗೆ ಸೇರಿರುವ ಮತ್ತು ಮರಣ ಹೊಂದಿರುವ ನೌಕರರಿಗೆ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನೌಕರರು ಬ್ಯಾನರ್ ಹಾಗೂ ಫಲಕಗಳನ್ನು ಹಿಡಿದು ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಾದಯಾತ್ರೆಯಲ್ಲಿ ಸಾವಿರಾರು ನೌಕರರು ಪಾಲ್ಗೊಂಡಿದ್ದರಿಂದ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಹೋಗುವ ವಾಹನಗಳು ಹೆದ್ದಾರಿಯಿಂದ ಕಾದ್ರಿ ದರ್ಗಾದ ಮೂಲಕ ಸಂಚರಿಸಲು ಪೊಲೀಸರು ವ್ಯವಸ್ಥೆ ಮಾಡಿದ್ದರು.