More

    ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

    2019ರ ನವೆಂಬರ್​ 23ರಂದು ಗೋಕಾಕ್ ಉಪ ಚುನಾವನಾ ಪ್ರಚಾರದ ವೇಳೆ ಭಾಷಣ ಮಾಡಿದ್ದ ಯಡಿಯೂರಪ್ಪ, ವೀರಶೈವ ಲಿಂಗಾಯತ ಸಮಾಜದ ಹೆಸರಿನಲ್ಲಿ ಮತ ಯಾಚನೆ ಮಾಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ನ.26ರಂದು ದೂರು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ತಿರಸ್ಕರಿಸಿದ್ದ ನ್ಯಾಯಾಲಯ, ಸೆ.1ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಅದನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.

    ಇದನ್ನೂ ಓದಿರಿ ರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​

    ಆ. 27ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್, ಸಮನ್ಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದ್ದು, ಯಡಿಯೂರಪ್ಪ ವಿರುದ್ಧದ ಮೂಲ ದೂರು ಹಾಗೂ ವಿಚಾರಣಾ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದುಪಡಿಸಿ ಆದೇಶಿಸಿದೆ.

    ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಕೋರ್ಟ್ ಹೇಳಿದ್ದೇನು?: ಅರ್ಜಿದಾರರ ವಿರುದ್ಧದ ದೂರಿನಲ್ಲಿ ಅಪರಾಧವೆನ್ನಿಸುವ ಯಾವುದೇ ಅಂಶಗಳಿಲ್ಲ. ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 123 (2) ಅಡಿ ಪ್ರಾಸಿಕ್ಯೂಷನ್ ಸಾಧ್ಯವಿಲ್ಲ. ಪ್ರಕರಣವನ್ನು ತನಿಖೆಗೆ ಆದೇಶಿಸುವಾಗ ಹಾಗೂ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ತಿರಸ್ಕರಿಸುವಾಗ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕ್ರಿಯೆ ಪಾಲನೆ ಮಾಡಿಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.

    ಅರ್ಜಿದಾರರ ವಾದವೇನು?: ವಿಚಾರಣೆ ವೇಳೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಬಿ ರಿಪೋರ್ಟ್ ತಿರಸ್ಕರಿಸಿರುವ ನ್ಯಾಯಾಲಯ, ಸಂಜ್ಞೇಯ ಅಪರಾಧ ಎಂದು ಪರಿಗಣಿಸಿ ಸಮನ್ಸ್ ಜಾರಿ ಮಾಡಿದೆ. ತನಿಖಾಧಿಕಾರಿಗಳು ಸಲ್ಲಿಸಿರುವ ಬಿ ರಿಪೋರ್ಟ್ ತಿರಸ್ಕರಿಸುವಂತಿದ್ದರೆ ನ್ಯಾಯಾಲಯ ದೂರುದಾರರ ಹೇಳಿಕೆ ಪಡೆದುಕೊಂಡು, ಯಾವ ಕಾರಣಕ್ಕೆ ವರದಿ ತಿರಸ್ಕರಿಸಲಾಗುತ್ತಿದೆ ಎಂಬುದನ್ನು ದಾಖಲಿಸಬೇಕು. ಆದರೆ, ಈ ಪ್ರಕರಣದಲ್ಲಿ ಈ ಪ್ರಕ್ರಿಯೆ ಅನುಸರಿಸಲಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

    ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

    ‘ಏನಪ್ಪ ಜಮೀರ್ ನಿನ್ನ ಹೆಸರು ಮೀಡಿಯಾದಲ್ಲಿ ಬರ್ತಿದೆ…’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts