ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ

Sul_Kvg 04
Published on

ಸುಳ್ಯ: ಕ್ಯಾನ್ಸರ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ಕ್ಯಾನ್ಸರ್ ದಿನ 2025 ಹಾಗೂ ಯುನೈಟೆಡ್ ಬೈ ಯುನಿಕ್ ಕಾರ್ಯಕ್ರಮದಡಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜನರಲ್ ಸರ್ಜರಿ ವಿಭಾಗದ ವತಿಯಿಂದ ಕ್ಯಾನ್ಸರ್ ದಿನದ ಕುರಿತಾದ ವಿಶೇಷ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.

ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಡೀನ್ ಡಾ.ನೀಲಾಂಬಿಕೆ ನಟರಾಜನ್, ಜನರಲ್ ಸರ್ಜರಿ ವಿಭಾಗ ಮುಖ್ಯಸ್ಥ ಡಾ.ಗೋಪಿನಾಥ್ ಪೈ, ಅಸೋಸಿಯೇಟ್ ಪ್ರೊಫೆಸರ್ ಡಾ.ರಂಜಿತ್ ಕೆ.ಬಿ. ಉಪಸ್ಥಿತರಿದ್ದರು. ತಜ್ಞ ವೈದ್ಯರು ಕ್ಯಾನ್ಸರ್ ಕುರಿತಾದ ವಾಹಿತಿ ನೀಡಿದರು. ವಿದ್ಯಾರ್ಥಿಗಳಿಂದ ಕ್ಯಾನ್ಸರ್ ಕುರಿತಾದ ಪ್ರಹಸನ ಪ್ರದರ್ಶನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net