More

    ಫೆ. 4ಕ್ಕೆ ಕ್ಯಾನ್ಸರ್ ಜಾಗೃತಿ ನಡಿಗೆ

    ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಇಲಾಖೆ ಸಹಯೋಗದಲ್ಲಿ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾ ಫೆ.4ರಂದು ಬೆಳಗ್ಗೆ 6 ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ‘ಕ್ಯಾನ್ ವಾಕ್’ ಜಾಗೃತಿ ನಡಿಗೆ ಹಮ್ಮಿಕೊಂಡಿದೆ.

    ನವೋದಯ ಇನ್ ಬೆಂಗಳೂರು, ಸಂಕಲ್ಪ ಚೇಸ್ ಕ್ಯಾನ್ಸರ್ ೌಂಡೇಷನ್ ರೀಸರ್ಚ್ ಟ್ರಸ್ಟ್ ಸಹಯೋಗದಲ್ಲಿ 5 ಕಿ.ಮೀ. ಸಾಗುವ ಕ್ಯಾನ್ಸ್ ಕುರಿತ ಜಾಗೃತಿ ನಡಿಗೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ ಎಂದು ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾ ಅಧ್ಯಕ್ಷ ಡಾ. ರಾಜಶೇಖರ್ ಸಿ. ಜಾಕ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಮಾಡಿದರೆ ಸೂಕ್ತ ಚಿಕಿತ್ಸೆಯಿಂದ ಕಾಯಿಲೆಯನ್ನು ಗುಣಪಡಿಸಬಹುದು. ನಿತ್ಯ ಯೋಗ, ವ್ಯಾಯಾಮದಂತಹ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಕ್ಯಾನ್ಸರ್ ರೋಗ ತಡೆಗೆ ಉತ್ತಮ ಆಹಾರ ಹಾಗೂ ಜೀವನಶೈಲಿ ಸಹಕಾರಿ. ಇದಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಆರು ತಿಂಗಳಿಗೆ ಒಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದ ಅವರು, ವಾಕಥಾನ್ ನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts