ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!

manifesto
Published on

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳು ಮತದಾರರ ಮನವೋಲಿಕೆಗೆ ತಮ್ಮ ಪಕ್ಷದಿಂದ ತರುವ ಯೋಜನೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ಸಾಕಷ್ಟು ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪ್ರಣಾಳಿಕೆ ಹಲವರ ಹುಬ್ಬೇರಿಸಿದೆ.

ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.

ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರಾಗಿದ್ದು, ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ.

ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಿಂದ ಈ ಸಹೋದರರು ಸ್ಪರ್ಧೆಗೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರೂ ಅಭ್ಯರ್ಥಿಗಳು ಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಪ್ರಣಾಳಿಕೆಯ ಮೂಲಕ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net