28.5 C
Bengaluru
Monday, January 20, 2020

ಮತದಾರರ ಮನವೊಲಿಸಿದ ಅಭ್ಯರ್ಥಿಗಳು

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಹಾನಗಲ್ಲ: ಸ್ಥಳೀಯ ಪುರಸಭೆ ಚುನಾವಣೆ ಮತದಾನ ಶುಕ್ರವಾರ ಶಾಂತಿಯುತವಾಗಿ ನಡೆದು, ಶೇ. 76.73ರಷ್ಟಾಗಿದೆ.

ಪುರಸಭೆಯ 23 ವಾರ್ಡ್​ಗಳಲ್ಲಿ ತುರುಸಿನಿಂದ ಮತದಾನ ಜರುಗಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರು ಮತಗಟ್ಟೆ ಬಳಿ ಮತದಾರರ ಮನವೊಲಿಸುವ ದೃಶ್ಯವಾಗಿತ್ತು.

ಬಿಜೆಪಿಯಿಂದ ಕಲ್ಯಾಣಕುಮಾರ ಶೆಟ್ಟರ ಹಾಗೂ ಕಾಂಗ್ರೆಸ್​ನಿಂದ ನಾಗಪ್ಪ ಸವದತ್ತಿ ಸ್ಪರ್ಧಿಸಿರುವ 21ನೇ ವಾರ್ಡ್​ನತ್ತ ಜನರ ಗಮನ ಕೇಂದ್ರೀಕೃತವಾಗಿತ್ತು. ಅಭ್ಯರ್ಥಿಗಳು ಮತದಾರರನ್ನು ಮನೆ-ಮನೆಗೆ ತೆರಳಿ ಕರೆತರುವುದು ಸಾಮಾನ್ಯವಾಗಿತ್ತು. 21ನೇ ವಾರ್ಡ್​ನಲ್ಲಿ ಅಂಗವಿಕಲ ವೃದ್ಧ ವೆಂಕಟೇಶ ಜೋಶಿ ತಮ್ಮ ತ್ರಿಚಕ್ರ ವಾಹನದಲ್ಲಿ ಆಗಮಿಸಿ ಮತದಾನ ಮಾಡಿದರು.

21ನೇ ವಾರ್ಡ್​ನ ಜನತಾ ಬಾಲಕಿಯರ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಸಂಸದ ಶಿವಕುಮಾರ ಉದಾಸಿ, ಶಾಸಕ ಸಿ.ಎಂ. ಉದಾಸಿ ಮತ ಚಲಾಯಿಸಿದರು. ಮಾಜಿ ಸಚಿವ ಮನೋಹರ ತಹಸೀಲ್ದಾರ್ 11ನೇ ವಾರ್ಡ್ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

14ನೇ ಹಣಕಾಸು ಯೋಜನೆಯಡಿ ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಹಿಂದಿನ ಯುಪಿಎ ಸರ್ಕಾರಕ್ಕಿಂತ ಕೇಂದ್ರದ ಮೋದಿ ಸರ್ಕಾರ ಹೆಚ್ಚು ಅನುದಾನ ಬಿಡುಗಡೆಗೊಳಿಸಿದೆ. ಇದು ಮತದಾರರಿಗೆ ಅರ್ಥವಾಗಿದೆ. ಹೀಗಾಗಿ ಪ್ರಸಕ್ತ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ತಾಲೂಕಿನಲ್ಲಿಯೂ ಪಕ್ಷದ ಶಾಸಕರಾಗಿದ್ದಾರೆ. ಅದರಂತೆ ಪುರಸಭೆಯಲ್ಲೂ ಬಿಜೆಪಿ ಆಡಳಿತಕ್ಕೆ ಬಂದರೆ ಅನುದಾನ ಸೋರಿಕೆಯಾಗದಂತೆ ನೇರವಾಗಿ ತಲುಪಲು ಸಹಾಯವಾಗುತ್ತದೆ.

| ಶಿವಕುಮಾರ ಉದಾಸಿ, ಸಂಸದ

ಲ್ಲ ಹಂತಗಳಲ್ಲಿ ಒಂದೇ ಪಕ್ಷದವರು ಆಡಳಿತದಲ್ಲಿದ್ದರೆ, ಅಭಿವೃದ್ಧಿ ವೇಗವಾಗಿ ಆಗಲು ಸಾಧ್ಯವಿದೆ. 2004 ರಿಂದ 2013ರ ಅವಧಿಯಲ್ಲಿ ಬಿಜೆಪಿ ಸರ್ಕಾರವಿದ್ದಾಗ ಬಹಳಷ್ಟು ಅಭಿವೃದ್ಧಿ ಕೈಗೊಳ್ಳಲಾಗಿತ್ತು. 2013ರಿಂದ ಪುರಸಭೆಯಲ್ಲಿ ಬಿಜೆಪಿ ಆಡಳಿತವಿದ್ದುದರಿಂದ ಕಾಂಗ್ರೆಸ್ ಸರ್ಕಾರ ನಯಾಪೈಸೆ ಅನುದಾನ ಬಿಡುಗಡೆಗೊಳಿಸಲಿಲ್ಲ. ಇದರಿಂದಾಗಿ ಪಟ್ಟಣದ ಅಭಿವೃದ್ಧಿ ಕುಂಠಿತವಾಗಿದ್ದಲ್ಲದೇ, ಪೌರಕಾರ್ವಿುಕರ ಸಂಭಾವನೆ ನೀಡುವುದು ಕಷ್ಟವಾದ ದುಸ್ಥಿತಿಗೆ ತಂದು ಮುಟ್ಟಿಸಿದ್ದರು. ಇದೆಲ್ಲಕ್ಕೂ ಈಗ ಬದಲಾವಣೆ ಕಾಲ ಬಂದಿದೆ.

| ಸಿ.ಎಂ. ಉದಾಸಿ ಶಾಸಕ

ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಪುರಸಭೆಯಲ್ಲಿ ಹತ್ತು ಹಲವು ಯೋಜನೆ ಜಾರಿಗೊಳಿಸಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಕುಡಿಯುವ ನೀರಿಗೆ ಬರಗಾಲದಲ್ಲೂ ತೊಂದರೆಯಾಗದಂತೆ ಕಾಳಜಿ ವಹಿಸಿದ್ದೇವೆ. ನಗರೋತ್ಥಾನ ಯೋಜನೆಯಲ್ಲಿ 7.5 ಕೋಟಿ ರೂ. ಬಿಡುಗಡೆಗೊಳಿಸಿ, 56 ಕಾಮಗಾರಿ ಕೈಗೊಳ್ಳಲಾಗಿದೆ. ಟ್ರೀ ಪಾರ್ಕ್, 7 ಎಕರೆ ಜಮೀನಿನಲ್ಲಿ ವಸತಿ ನಿವೇಶನ ನೀಡಿದ್ದೇವೆ. ನವನಗರ ಬಡಾವಣೆಯಲ್ಲಿ 2.50 ಕೋಟಿ ರೂ. ಅಭಿವೃದ್ಧಿ ಕೈಗೊಂಡಿದ್ದೇವೆ. ಇದೇ ಅಭಿವೃದ್ಧಿ ಕಾರ್ಯ ಮತಗಳಾಗಿ ಈಗ ಪರಿವರ್ತನೆಯಾಗಿವೆ.

| ಮನೋಹರ ತಹಸೀಲ್ದಾರ್ ಮಾಜಿ ಸಚಿವ

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...