More

    ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು

    ಪಾಂಡವಪುರ: ತಾಲೂಕಿನ ಕೊಡಹಳ್ಳಿ ಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರೈತ ಸಂಘ ಮತ್ತು ಕಾಂಗ್ರೆಸ್ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ರಾಮಯ್ಯ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

    ಒಟ್ಟು 10 ಸದಸ್ಯ ಬಲದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ 5 ವರ್ಷದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಇತ್ತೀಚೆಗೆ ಚುನಾವಣೆ ನಡೆದು ರೈತ ಸಂಘ, ಕಾಂಗ್ರೆಸ್ ಮೈತ್ರಿಕೂಟ ಬೆಂಬಲಿತ ಎಲ್ಲ 10 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷಗಾದಿಗೆ ಬುಧವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬೇರ‌್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಸಂಘಗಳ ನಿಬಂಧಕರ ಕಚೇರಿಯ ನಿರ್ಮಲಾ ಅವರು ಮಂಜುನಾಥ್ ಮತ್ತು ರಾಮಯ್ಯ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

    ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ರೈತ ಸಂಘ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.

    ನೂತನ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಡೇರಿಯ ಈ ಹಿಂದಿನ ಆಡಳಿತ ಮಂಡಳಿ ಸದಸ್ಯರು ಸಂಘವನ್ನು ಉತ್ತಮವಾಗಿ ಮುನ್ನೆಡೆಸಿಕೊಂಡು ಬಂದಿದ್ದಾರೆ. ನಾನೂ ಸಂಘದ ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಯಾವುದೇ ಲೋಪದೋಷಗಳು ಬಾರದಂತೆ ಉತ್ತಮ ಆಡಳಿತ ನೀಡುವುದಾಗಿ ಭರವಸೆ ನೀಡಿದರು.

    ಸಂಘದ ನಿರ್ದೇಶಕರಾದ ಕುಮಾರ್, ನಾರಾಯಣಗೌಡ, ಅನುಪಮಾ, ಪ್ರೇಮಾ, ಚೆಲುವೇಗೌಡ, ಕಾಳೇಗೌಡ, ಶಂಕರ್‌ನಾರಾಯಣ, ಎನ್.ಸ್ವಾಮೀಗೌಡ, ಗ್ರಾಪಂ ಸದಸ್ಯರಾದ ನಾಗರಾಜು, ರವಿಕುಮಾರ್, ಮಾಜಿ ಸದಸ್ಯ ರವಿ, ಮುಖಂಡರಾದ ಪಿ.ಎಲ್.ಪುಟ್ಟರಾಮು, ಶ್ರೀನಿವಾಸ್, ಕಾಳೇಗೌಡ, ಲಕ್ಷ್ಮೀಸಾಗರ, ವಿಎಸ್‌ಎಸ್‌ಎನ್ ನಿರ್ದೇಶಕ ಎಸ್.ಲೋಕೇಶ್, ಸತೀಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts