More

    ಮೇಲ್ಸೇತುವೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಿ

    ಬೆಳಗಾವಿ: ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ಖಾನಾಪುರ ರಸ್ತೆಯಿಂದ ಬರುವ ವಾಹನಗಳಿಗೆ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಸಮೀಪದ ಗೋಗಟೆ ವೃತ್ತದಲ್ಲಿ ಇನ್ನೊಂದು ಮೇಲ್ಸೇತುವೆ ನಿರ್ಮಾಣ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸುವಂತೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚಿಸಿದರು.

    ಸ್ಮಾರ್ಟ್ ಸಿಟಿ, ಲೋಕೋಪಯೋಗಿ ಇಲಾಖೆ, ಪಾಲಿಕೆ ಅಧಿಕಾರಿಗಳು ಸೇರಿದಂತೆ ವಿವಿಧ ವಿಭಾಗದ ಅಧಿಕಾರಿಗಳೊಂದಿಗೆ ನಗರದ ಗೋಗಟೆ ವೃತ್ತಕ್ಕೆ ಗುರುವಾರ ಭೇಟಿ ನೀಡಿದ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಗೋಗಟೆ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣದಿಂದ ಖಾನಾಪುರ ರಸ್ತೆ, ಕಾಂಗ್ರೆಸ್ ರಸ್ತೆ ಹಾಗೂ ರೈಲ್ವೆ ನಿಲ್ದಾಣದಿಂದ ಬಂದು ಹೋಗುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ಅಲ್ಲದೆ, ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯವಾಗುತ್ತದೆ.

    ಈಗಾಗಲೇ ಗೋಗಟೆ ವೃತ್ತದ ಬಳಿಯಿರುವ ರೈಲ್ವೆ ನಿಲ್ದಾಣದ ಮೇಲ್ಸೇತುವೆ ಮೂಲಕ ಮತ್ತು ಕಾಂಗ್ರೆಸ್ ರಸ್ತೆ ಮಾರ್ಗವಾಗಿ ಬರುವ ವಾಹನಗಳು ಹಾಗೂ ರೈಲ್ವೆ ನಿಲ್ದಾಣದಿಂದ ಬರುವ ವಾಹನಗಳ ಗೋಗಟೆ ವೃತ್ತದ ಬಳಿ ನಿಲ್ಲಬೇಕು. ಇದರಿಂದ ಸಂಚಾರದ ದಟ್ಟಣೆ ಹೆಚ್ಚಾಗುತ್ತಿದೆ. ಈ ಎಲ್ಲ ಸಮಸ್ಯೆ ತಪ್ಪಿಸಲು ಇನ್ನೊಂದು ಮೇಲ್ಸೇತುವೆ ನಿರ್ಮಾಣ ಅನಿವಾರ್ಯವಾಗಿದೆ ಎಂದರು.

    ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತ ಸಂಜೀವಕುಮಾರ ಹುಲಿಕಾಯಿ, ರಾಜೇಶ, ಡಿ.ವೈ. ಪವಾರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts