ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು

Bharath
Published on

ಬೆಂಗಳೂರು: ಕ್ಯಾಂಟರ್​ವೊಂದು ಕೆಟ್ಟು ರಸ್ತೆಯಲ್ಲೇ ನಿಂತಿದ್ದರೆ, ಬುಲೆಟ್ ಸವಾರರಿಬ್ಬರ ನಸೀಬು ಕೂಡ ಕೆಟ್ಟಿತ್ತು. ಪರಿಣಾಮವಾಗಿ ಅವರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅರ್ಥಾತ್, ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿಯಾಗಿ ಯುವಕ-ಯುವತಿ ಇಬ್ಬರೂ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಆವತಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಕೆಟ್ಟುನಿಂತಿದ್ದ ಕ್ಯಾಂಟರ್​​ಗೆ ಹಿಂಬದಿಯಿಂದ ಬುಲೆಟ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬುಲೆಟ್​ನಲ್ಲಿದ್ದ ಇಬ್ಬರೂ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬುಲೆಟ್ ಚಿಕ್ಕಬಳ್ಳಾಪುರ ಕಡೆಯಿಂದ ಬರುತ್ತಿದ್ದು, ಅದರಲ್ಲಿದ್ದ ಯುವಕ ಭರತ್ ಎಂಬುದು ಗೊತ್ತಾಗಿದೆ. ಯುವತಿಯ ಕುರಿತು ಇನ್ನೂ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net