ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು

ಬೆಂಗಳೂರು: ಕ್ಯಾಂಟರ್​ವೊಂದು ಕೆಟ್ಟು ರಸ್ತೆಯಲ್ಲೇ ನಿಂತಿದ್ದರೆ, ಬುಲೆಟ್ ಸವಾರರಿಬ್ಬರ ನಸೀಬು ಕೂಡ ಕೆಟ್ಟಿತ್ತು. ಪರಿಣಾಮವಾಗಿ ಅವರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅರ್ಥಾತ್, ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿಯಾಗಿ ಯುವಕ-ಯುವತಿ ಇಬ್ಬರೂ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಆವತಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಕೆಟ್ಟುನಿಂತಿದ್ದ ಕ್ಯಾಂಟರ್​​ಗೆ ಹಿಂಬದಿಯಿಂದ ಬುಲೆಟ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬುಲೆಟ್​ನಲ್ಲಿದ್ದ ಇಬ್ಬರೂ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬುಲೆಟ್ ಚಿಕ್ಕಬಳ್ಳಾಪುರ ಕಡೆಯಿಂದ ಬರುತ್ತಿದ್ದು, … Continue reading ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು