ಜ.5ರಂದು ಕಂಟೋನ್ಮೆಂಟ್ ಕಥೆಗಳು ಬಿಡುಗಡೆ

book
Published on

ಬೈಂದೂರು: ಲೇಖಕ, ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡ ಅವರ ಸೈನ್ಯ ಹಿನ್ನೆಲೆ ಕಥಾಸಂಕಲನ ಕಂಟೋನ್ಮೆಂಟ್ ಕಥೆಗಳು ಕೃತಿಯನ್ನು ಜ.5ರಂದು ನಾಗೂರು ಕೃಷ್ಣಲಲಿತ ಕಲಾಮಂದಿರದಲ್ಲಿ ಬೆಳಗ್ಗೆ 11ಕ್ಕೆ ಕಸಾಪ ಉಡುಪಿ ಜಿಲ್ಲೆ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಬಿಡುಗಡೆಗೊಳಿಸುವರು. ಲಾವಣ್ಯ ಬೈಂದೂರು ಅಧ್ಯಕ್ಷ ನರಸಿಂಹ ಬಿ.ನಾಯಕ್ ಅಧ್ಯಕ್ಷತೆ ವಹಿಸುವರು. ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net