ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸಹಸವಾರನಿಗೆ ಗಾಯ

accident-15
Published on

ಬೆಳ್ತಂಗಡಿ: ನಾರಾವಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಸಹ ಸವಾರ ಗಾಯಗೊಂಡಿದ್ದಾರೆ. ಅಜಿತ್ ಎಂಬುವರು ಗಾಯಗೊಂಡ ಸಹ ಸವಾರ. ನಾರಾವಿ ಸರ್ಕಾರಿ ಆಸ್ಪತ್ರೆ ಬಳಿ ನಾರಾವಿ ಕಡೆಯಿಂದ ಬರುತ್ತಿದ್ದ ಕಾರು ರಕ್ಷಿತ್ ಎಂಬುವರು ಚಲಾಯಿಸಿಕೊಂಡು ಬರುತ್ತಿದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಈ ವೇಳೆ ದ್ವಿಚಕ್ರ ವಾಹನ ರಸ್ತೆ ಬದಿಗೆ ಬಿದ್ದು ಸಹ ಸವಾರ ಅಜಿತ್ ಎಂಬುವರ ಬಲಕಾಲಿನ ಪಾದ ಹಾಗೂ ಬೆರಳಿಗೆ ಗಾಯವಾಗಿದೆ. ಗಾಯಗೊಂಡ ಅವರನ್ನು ನಾರಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net