ಮಗುವನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಲು ಹೋದ ವ್ಯಕ್ತಿ ಸೇರಿದ್ದು ಸ್ಮಶಾನಕ್ಕೆ

ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲು ವಾಹನಗಳು ದೊರೆಯದೆ ಪಾಲಕರು ಪರದಾಡುತ್ತಿದ್ದ ವೇಳೆ, ಸಹಾಯ ಮಾಡಲು ಮುಂದಾದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ರವಿಕಿರಣ್ ಮೃತ. ಸುಮಂತ್​ ಎಂಬ ಮಗು ಅನಾರೋಗ್ಯಕ್ಕೀಡಾಗಿದ್ದು, ಪಾಲಕರಾದ ಗಂಗಾಧರ್, ವರಲಕ್ಷ್ಮೀ ಎಂಬುವರು ಬೆಳಗ್ಗೆ 3 ಗಂಟೆ ವೇಳೆಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ವಾಹನ ಸಿಗದೆ ಪರದಾಡುತ್ತಿದ್ದರು. ಈ ವೇಳೆ ರವಿಕಿರಣ್ ಎಂಬಾತ ಕಾರಿನ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಬಿಡುವುದಾಗಿ‌ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಬೆಂಗಳೂರಿನ ನವರಂಗ್​ ಸಿಗ್ನಲ್​ ಬಳಿ ಕಾರಿಗೆ ವೇಗವಾಗಿ ಬಂದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿದ್ದು ಐವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಪೋರ್ಟೀಸ್, ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ರವಿಕಿರಣ್​ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಬಸ್‌ ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಪ್ರಕಾಶ್​ ನಾಯಕ್​ ಹಾಗೂ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *