ಕಲಬುರಗಿ: ರಾಷ್ಟ್ರೀಯ ಹೆದ್ದಾರಿಯ ಸಮೀಪವಿರುವ ಕಮಲಾಪುರ ಬಳಿಯ ಕುದುರೆಮುಖ ಗುಡ್ಡದ ಬಳಿ ಕಾರು ಮತ್ತು ಬೊಲೆರೋ ಪಿಕಪ್ ರಭಸವಾಗಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ದುರ್ಘಟನೆ ಇಂದು (ನ.09) ಬೆಳಗಿನ ಜಾವ ಸಂಭವಿಸಿದೆ.
ಇದನ್ನೂ ಓದಿ: ತಾಯಿಯಿಂದಲೇ ಹಸುಗೂಸಿನ ಹತ್ಯೆ? ಲ್ಯಾಬ್ ವರದಿ ಬಳಿಕ ಹೊರಬಿತ್ತು ಸತ್ಯಾಂಶ!
ಹುಮನಾಬಾದ್ ಮಾರ್ಗದಿಂದ ಆಗಮಿಸುತ್ತಿದ್ದ ಕಾರು ಮತ್ತು ಎದುರಿನಿಂದ ವೇಗವಾಗಿ ಬರುತ್ತಿದ್ದ ಪಿಕಪ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಗಾಣಗಾಪುರ ದರ್ಶನಕ್ಕೆ ಕಾರಿನಲ್ಲಿ ಹೊರಟಿದ್ದವರು ಭೀಕರ ಅಪಘಾತದಲ್ಲಿ ಬಲಿಯಾಗಿದ್ದಾರೆ. ಮೃತರು ಹೈದರಾಬಾದ್ ಮೂಲದವರಾದ ಭಾರ್ಗವ ಕೃಷ್ಣ, ಅವರ ಪತ್ನಿ ಸಂಗೀತಾ ಹಾಗೂ ಪುತ್ರ ರಾಘವನ್ ಎಂದು ಗುರುತಿಸಲಾಗಿದೆ. ಸದ್ಯದ ಮಟ್ಟಿಗೆ ಚಾಲಕನ ಹೆಸರು ತಿಳಿದುಬಂದಿಲ್ಲ.
ಘಟನೆ ನಡೆದ ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಎಎಸ್ಪಿ ಬಿಂದುಮಣಿ ಎಂ.ಎನ್, ಸಿಪಿಐ ಶಿವಶಂಕರ ಸಾಹು, ಪಿಎಸ್ ಐ ಆಶಾ, ಸಂಗೀತಾ ಹಾಗೂ ಸಿಬ್ಬಂದಿ ಭೇಟಿ ನೀಡಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಧಾರ್ ಕಾರ್ಡ್ ಬಳಕೆದಾರರೇ ಇದೇ ನಿಮಗೆ ಕಡೆಯ ದಿನಾಂಕ! ತಪ್ಪಿದರೆ ರದ್ದಾಗಬಹುದು ಇರಲಿ ಎಚ್ಚರ