More

  ನಿದ್ದೆ ಮಂಪರಿನಲ್ಲಿ ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು: ಶಬರಿಮಲೆಯಿಂದ ವಾಪಾಸ್ಸಾಗುವಾಗ ಘಟನೆ

  ರಾಮನಗರ: ವಿದ್ಯುತ್​ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ಗುರುವಾರ ಬೆಳ್ಳಂ ಬೆಳಗ್ಗೆ ನಡೆದಿದೆ.

  ಶಬರಿಮಲೆಗೆ ಹೋಗಿ ವಾಪಸ್​ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದುದ್ದು ಘಟನೆಗೆ ಕಾರಣವೆಂದು ತಿಳಿದುಬಂದಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿಗೆ ಗಂಭೀರ ಗಾಯವಾಗಿದೆ.

  ಮೃತರ ಶವಗಳನ್ನು ಮತ್ತು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರಿನಲ್ಲಿದ್ದವರು ಮಂಗಳೂರು ಮೂಲದವರು ಎಂದು ತಿಳಿದುಬಂದಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

  ಘಟನಾ ಸ್ಥಳಕ್ಕೆ ಕುದೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts