ನೀರಿನ ಟ್ಯಾಂಕ್​ಗೆ ಅಪ್ಪಳಿಸಿದ ಕಾರು, ಇಬ್ಬರು ಸ್ಥಳದಲ್ಲೇ ಸಾವು

Accident
Published on

ರಾಯಚೂರು: ರಾಜ್ಯದಲ್ಲಿ ಹಬ್ಬದ ದಿನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಇದರಲ್ಲಿ ಕಾರೊಂದು ನೀರಿನ ಟ್ಯಾಂಕ್​ಗೆ ಅಪ್ಪಳಿಸಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರಾಯಚೂರು ಜಿಲ್ಲೆ ಸಿರವಾರದ ಹರವಿ ಕ್ಯಾಂಪ್​ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಅದೇ ರಭಸದಲ್ಲಿ ರಸ್ತೆ ಬದಿಯಲ್ಲಿದ್ದ ನೀರಿನ ಟ್ಯಾಂಕ್​ಗೆ ಅಪ್ಪಳಿಸಿದೆ. ಇದರಿಂದಾಗಿ ಹರವಿ ಕ್ಯಾಂಪಿನ ಹನುಮೇಶ (21), ಚೌದ್ರಿ ಕ್ಯಾಂಪಿನ ರಾಜೇಶ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇವರೊಂದಿಗೆ ಕಾರಿನಲ್ಲಿದ್ದ ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾನ್ವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net