More

    ಭೀಕರ ಅಪಘಾತ: ತಾಯಿ-ಮಗ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

    ರಾಯಚೂರು: ಕಾರು ಮತ್ತು ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

    ಈ ಅಪಘಾತದಲ್ಲಿ ಯರದೊಡ್ಡಿ ತಾಂಡಾದ ಭಾರತಿ (29), ಆಕೆಯ ಪುತ್ರ ಉದಯ್ ಸಿಂಗ್ (11) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮುದಗಲ್ ಬಳಿಯ ಇಳಕಲ್ ರಸ್ತೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಈ ಸಾವು ಸಂಭವಿಸಿದೆ.

    ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ‘ಹೆಂಡ್ತಿಯನ್ನು ಚೆನ್ನಾಗಿ ನೋಡಿಕೊ’ ಎಂದ ಸಂಬಂಧಿಕರಿಬ್ಬರಿಗೂ ಇರಿದ; ಒಬ್ಬನ ಸಾವು, ಇನ್ನೊಬ್ಬನ ಪರಿಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts