

ಕಡಬ: ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹಳೇ ಸ್ಟೇಷನ್ ಎಂಬಲ್ಲಿ ಶನಿವಾರ ಕಾರು ಹಾಗು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಹಳೇ ಸ್ಟೇಷನ್ ನಿವಾಸಿ, ಕಡಬ ಸಿ.ಎ.ಬ್ಯಾಂಕ್ ಮಾಜಿ ಉದ್ಯೋಗಿ ಹಸನ್(52)ಮೃತಪಟ್ಟವರು.
ಮನೆಯಿಂದ ಕಡಬ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಹಸನ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಸ್ಥಳೀಯರು ಕಡಬ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನತ್ತ ತೆರಳುತ್ತಿದ್ದಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೈದರ್ ಎಂಬುವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಹಾಗೂ ಅದರ ಚಾಲಕ ಮಂಜನಾಥ್ನನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.