

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಬಿಕರ್ನಕಟ್ಟೆಯ ಕೈಕಂಬ ಬಳಿ ಚಲಿಸುತ್ತಿದ್ದ ಕಾರೊಂದು ಭಾನುವಾರ ಬೆಂಕಿಗೆ ಆಹುತಿಯಾಗಿದೆ.
ಕಾರಿನ ಬೋನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡು, ಏಕಾಏಕಿ ಹೊತ್ತಿ ಉರಿಸಿದೆ. ಜೋರಾಗಿ ಸುರಿಯುತ್ತಿದ್ದ ಮಳೆಯ ನಡುವೆ ಕ್ಷಣಾರ್ಧದಲ್ಲಿ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಕರಕಲಾಗಿದೆ. ಈ ವೇಳೆ ಎಲ್ಲ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ರಸ್ತೆಯಲ್ಲಿ ಹರಿಯುತ್ತಿದ್ದ ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಿಲ್ಲ.