More

  ರಸ್ತೆ ವಿಭಜಕ್ಕೆ ಕಾರು ಡಿಕ್ಕಿ: ಚಾಲಕಿ ಸಾವು

  ಮೈಸೂರು: ಮೈಸೂರು-ಬೆಂಗಳೂರು ರಸ್ತೆಯ ಸಿದ್ದಲಿಂಗಪುರದ ಬಳಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದು ಚಾಲನೆ ಮಾಡುತ್ತಿದ್ದ ಮಹಿಳೆ ಮತಪಟ್ಟಿದ್ದಾರೆ.


  ನಗರದ ಸಾಹುಕಾರ್ ಚೆನ್ನಯ್ಯ ರಸ್ತೆಯ ನಿವಾಸಿ ಪರಮೇಶ್ವರಪ್ಪ ಅವರ ಪತ್ನಿ ರಾಜೇಶ್ವರಿ ಮತರು.

  ರಾಜೇಶ್ವರಿ ಅವರು ಶುಕ್ರವಾರ ಕಾರಿನಲ್ಲಿ ಬೆಂಗಳೂರು ಕಡೆ ತೆರಳುತ್ತಿದ್ದರು. ವಾಹನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

  ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿ ಆಗಲಿಲ್ಲ. ಎನ್.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts