

ಕಾರ್ಕಳ: ಕಾರೊಂದು ರಿಕ್ಷಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷ ಚಾಲಕ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ಪರ್ಪಲೆ ಬಳಿಯಲ್ಲಿ ಮಂಗಳವಾರ ನಡೆದಿದೆ.
ಬೆಂಗಳೂರಿನಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದರು. ಚಾಲಕನ ಅತಿ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡ ಕಾರು ರಿಕ್ಷಾಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ರಿಕ್ಷಾ ಚಾಲಕ ಬೆಳ್ಮಣ್ ನಿವಾಸಿ ಬಾಬು ಶೆಟ್ಟಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.