ಹಳಿಯಾಳ: ಚಾಲಕನ ನಿಯಂತ್ರಣ ತಪ್ಪಿ ಹಳಿಯಾಳ- ದಾಂಡೇಲಿ ರಸ್ತೆಯ ತಾಲೂಕಿನ ಕೆಸರೊಳ್ಳಿ ಕ್ರಾಸ್ ಹತ್ತಿರ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಸಹಿತ ಕಾರಿನಲ್ಲಿದ್ದ ಸವಾರರಿಗೆ ಚಿಕ್ಕಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರ ನಡೆದಿದೆ.
ದಾಂಡೇಲಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಹೆದ್ದಾರಿಯಿಂದ ನೇರವಾಗಿ ಪಕ್ಕದ ಕಬ್ಬಿನ ಗದ್ದೆಯಲ್ಲಿ ಕಾರು ಪಲ್ಟಿಯಾಗಿದ್ದು, ಸಂಪೂರ್ಣವಾಗಿ ತಲೆ ಕೆಳಗಾಗಿ ಬಿದ್ದಿದೆ. ಘಟನೆ ನಡೆದ ತಕ್ಷಣ ಸ್ಥಳೀಯ ನಿವಾಸಿಗಳು ಗಾಯಳುಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನಿಸಿದರು. ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.