ಕೆಂಪುಕೋಟೆಯ ಬಳಿ ಕಾರು ಸ್ಪೋಟ ದುರಂತ: ಘಟನೆ ಉದ್ದೇಶಪೂರ್ವಕವಲ್ಲ, ಆಕಸ್ಮಿಕ; ಕಾರಿನ ವಿಳಾಸ ಪತ್ತೆ| Car explosion

ವಿಜಯವಾಣಿ - 2025-11-10T195912.773
Published on

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಇಂದು(ನ. 10) ಸಂಜೆ 6.30ರ ಸುಮಾರಿಗೆ ನಡೆದ ಕಾರು ಸ್ಫೋಟದ(Car explosion) ಘಟನೆ ಉದ್ದೇಶಪೂರ್ವಕವಲ್ಲ. ಆಕಸ್ಮಿಕವಾಗಿ ಸಂಭವಿಸಿದ ಘಟನೆ ಎಂದು ದೆಹಲಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ವರದಿಯಾಗಿದೆ.

ಹರಿಯಾಣ ರಾಜ್ಯದ ಪಾಸಿಂಗ್ ಹೊಂದಿದ್ದ ಕಾರು ಎಂಬುದು ತಿಳಿದು ಬಂದಿದೆ. ಎಚ್​ಆರ್​-7674 ಕಾರಿನ ನಂಬರ್. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಹಿಂಬದಿಯಿಂದ ಸ್ಫೋಟಗೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಏರಿಕೆ

ಸಂಜೆ ಸುಮಾರು 6.30ರ ಸುಮಾರಿಗೆ ನಡೆದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರಿಗೆ ಲ್​ಎನ್​ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಪಕ್ಕದಲ್ಲಿದ್ದ 7 ರಿಂದ 8 ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ. ಸುಮಾರು 20 ಅಗ್ನಿಶಾಮಕದಳ ವಾಹನಗಳು ಧಾವಿಸಿ ಬೆಂಕಿಯನ್ನು ನಂದಿಸಿವೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net