More

    ಕಾರು ಕೆರೆಗೆ ಬಿದ್ದು ಯುವಕ ಸಾವು

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಯುವಕನೋರ್ವ ನೀರಿನಲ್ಲಿ ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ಚಿಕ್ಕಮಗಳೂರು ಹೊರವಲಯದ ಅಂಬಳೆ ಗ್ರಾಮದಲ್ಲಿ ನಡೆದಿದೆ.

    ಅಂಬಳೆ ಗ್ರಾಮದ ದಿನೇಶ್ (33) ಮೃತಪಟ್ಟ ಯುವಕ. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು. ಗುರುವಾರ ಬೆಳಗಿನ ಜಾವ ಅಂಬಳೆ ಗ್ರಾಮದ ಸಂತೋಷ್ ಎಂಬ ಯುವಕನೊಂದಿಗೆ ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ತಮ್ಮ ಕಾರಿನಲ್ಲಿ ಹೊರಟಿದ್ದಾರೆ. ಅಂಬಳೆ ಗ್ರಾಮದ ಕೆರೆ ಏರಿ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ನೇರವಾಗಿ ಕೆರೆಗೆ ಬಿದ್ದಿದೆ. ಆಗ ದಿನೇಶ್ ಕಾರಿನಿಂದ ಹೊರಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೋರ್ವ ಯುವಕ ಸಂತೋಷ್ ಅದೃಷ್ಟವಶಾತ್ ಕಾರಿನಿಂದ ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ದಿನೇಶ್ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts