ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು!

ಕೋಲಾರ: ಭೀಕರ ಅಪಘಾತವೊಂದರಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ. ಕೋಲಾರ ತಾಲೂಕಿನ ಶಾಪೂರು ಕ್ರಾಸ್ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ವಿಮಲ್​ (27) ಮತ್ತು ಶರೀನಾ (22) ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಹರ್ಷಿತ, ಡೇವಿಡ್, ವಿಮೋನಿಯಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತರು. ಚೆನ್ನೈನಿಂದ ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿಗೆ … Continue reading ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು!