ಡಿವೈಡರ್​ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ದುರ್ಮರಣ | Accident

dk - 2025-04-06T182921.032
Published on

ಹುಬ್ಬಳ್ಳಿ: ಇಲ್ಲಿನ ಹೊರವಲಯದ ನೂಲ್ವಿಕ್ರಾಸ್​ ಬಳಿ ಭಾನುವಾರ(ಏ.06) ಸಂಜೆ ಭೀಕರ ಅಪಘಾತ(Accident) ಸಂಭವಿಸಿದ್ದು, ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದುರ್ಮರಣ ಹೊಂದಿದ್ದಾರೆ.

ವರೂರು ಗ್ರಾಮದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಕಾರ್‌ನಲ್ಲಿ ಮೂವರು ಮಹಿಳೆಯರಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಮೃತರನ್ನ ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಗಾಯಗೊಂಡಿದ್ದ ಮೂವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟೆಂಪೋ ಟ್ರಾವೆಲರ್ ಪಲ್ಟಿ

ಹಾವೇರಿ: ಬಂಕಾಪುರ ಟೋಲ್ ಪ್ಲಾಜಾ ಬಳಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಸಾಗಿಸುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾಗಿದೆ.

ಹುಬ್ಬಳ್ಳಿ ಕಡೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹಾವೇರಿ ಕಡೆಗೆ ಸಾಗಿಸುತ್ತಿದ್ದ ವೇಳೆ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net