

ನಾಯಂಡಹಳ್ಳಿ: ಬೆಳಂಬೆಳಗ್ಗೆ ಬೆಂಗಳೂರಿನ ನಾಯಂಡಹಳ್ಳಿ ಬಳಿಯಿರುವ ರಿಂಗ್ ರಸ್ತೆಯಲ್ಲಿ ಬಿಎಂಟಿಸಿ ಬಸ್ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದ ಕಾರು ತಕ್ಷಣವೇ ಹೊತ್ತಿ ಉರಿದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಅದೃಷ್ಟವಶಾತ್ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ಐ20 ಕಾರು ಹಿಂಬದಿಯಿಂದ ಬಿಎಂಟಿಸಿ ಬಸ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ನೋಡ ನೋಡತ್ತಿದ್ದಂತೆ ಕಾರು ಧಗಧಗನೆ ಹೊತ್ತಿಉರಿದಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿದೆ.